ವರದಿಗಾರ ಅಕ್ಷಯ್ ಸಿಂಗ್ ಸಂಸ್ಕಾರದಲ್ಲಿ ರಾಹುಲ್, ಕೇಜ್ರಿವಾಲ್ ಭಾಗಿ
ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ...

ನವದೆಹಲಿ: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಂಡಿದ್ದರು.
38 ವರ್ಷದ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರವು ಪೂರ್ವ ದೆಹಲಿಯ ನಿಗಮಬೋದಲ್ಲಿ ಭಾನುವಾರ ನೆರವೇರಿತು. ರಾಹುಲ್ ಅವರಲ್ಲದೇ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಮಾಕನ್ ಹಾಗೂ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ್ ಸಿಂಗ್, ರಣದೀಪ್ ಸುರ್ಜೇವಾಲಾ ಅವರೂ ಅಂತ್ಯ ಸಂಸ್ಕಾರ ಭಾಗವಹಿಸಿದ್ದರು.
ಅಕ್ಷಯ್ ಸಿಂಗ್ ಅವರು ವ್ಯಾಪಂ ಹಗರಣದಲ್ಲಿ ಹೆಸರು ಕೇಳಿಬಂದ ಬಳಿಕ ಸಾವನ್ನಪ್ಪಿದ ಯುವತಿಯ ಪೋಷಕರ ಸಂದರ್ಶನ ನಡೆಸಿದ ಬಳಿಕ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


