ಸಾರ್ವಜನಿಕವಾಗಿ ಯುವತಿಯನ್ನು ಬೆತ್ತಲೆಗೊಳಿಸಿ, ಮೊಬೈಲ್ ನಲ್ಲಿ ಸೆರೆ ಹಿಡಿದರು!
ಸಾರ್ವಜನಿಕವಾಗಿ ಹುಡುಗಿಯೊಬ್ಬಳನ್ನು ಬೆತ್ತಲೆಗೊಳಿಸಿದ ಕಿಡಿಗೇಡಿಗಳು, ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ...

ಜಮ್ಮು ಮತ್ತು ಕಾಶ್ಮೀರ: ಸಾರ್ವಜನಿಕವಾಗಿ ಹುಡುಗಿಯೊಬ್ಬಳನ್ನು ಬೆತ್ತಲೆಗೊಳಿಸಿದ ಕಿಡಿಗೇಡಿಗಳು, ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉದಂಪುರ್ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಐವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ವಿಡಿಯೋವನ್ನು ವಾಟ್ಸಾಪ್ ನಲ್ಲಿ ಹರಿಬಿಟ್ಟಿದ್ದು, ಸಂಚಲನ ಸೃಷ್ಟಿಸಿದೆ.
ಜಗನೂ ಎಂಬ ಪ್ರದೇಶದಲ್ಲಿ ತನ್ನ ಗೆಳಯನೊಂದಿಗೆ ತೆರಳುತ್ತಿದ್ದಾಗ ಐದು ಜನರ ಗುಂಪೊಂದು ಬೈಕಿಗೆ ಅಡ್ಡಗಟ್ಟಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದಾರೆ. ಇದಕ್ಕೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಆಕೆಯನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿರುವುದಲ್ಲದೇ, ಆ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ತೆಗೆದಿದ್ದಾರೆ. ನಂತರ ಈ ವಿಡಿಯೋವನ್ನು ವಾಟ್ಸಾಪ್ ನಲ್ಲಿ ಹರಿಬಿಡಲಾಗಿದೆ.
ಯುವತಿ ಉದಂಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐವರು ಕಿಡಿಗೇಡಿಗಳಲ್ಲಿ ಒಬ್ಬ ಸೇನಾ ಸಿಬ್ಬಂದಿಯಾಗಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾಳೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಆಯುಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


