ದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಯಾ ವಿರುದ್ಧ ಡಿಎಂಕೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಯಾ ವಿರುದ್ಧ ಡಿಎಂಕೆ ಮೇಲ್ಮನವಿ
ಜಯಲಲಿತಾ
Published On :

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಡಿಎಂಕೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪೂ ಪ್ರಶ್ನಿಸಿ ಇಂದು ಡಿಎಂಕೆ ಪಕ್ಷದ ಮುಖಂಡ ಅನ್ಬಗಳನ್ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.

ಇದೇ ಪ್ರಕರಣ ಸಂಬಂಧ ಒಂದು ವಾರಗಳ ಹಿಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯೊಂದಿಗೆ ಡಿಎಂಕೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.