ದೇಶ

ಪ್ರತಿ ಸಾವನ್ನೂ ವ್ಯಾಪಂ ನೊಂದಿಗೆ ತಳಕು ಹಾಕುವುದು ಸರಿಯಲ್ಲ: ಶಿವರಾಜ್ ಸಿಂಗ್ ಚೌಹಾಣ್

ಪ್ರತಿಯೊಂದು ಸಾವನ್ನು ವ್ಯಾಪಂ ಹಗರಣದೊಂದಿಗೆ ತಳಕು ಹಾಕುವುದು ಸರಿಯಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಪ್ರತಿ ಸಾವನ್ನೂ ವ್ಯಾಪಂ ನೊಂದಿಗೆ ತಳಕು ಹಾಕುವುದು ಸರಿಯಲ್ಲ: ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್(ಸಂಗ್ರಹ ಚಿತ್ರ)
Published On :

ಭೋಪಾಲ್: ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳು ಸಾವನ್ನಪ್ಪುತ್ತಿರುವುದರ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ಪ್ರತಿಯೊಂದು ಸಾವನ್ನು ವ್ಯಾಪಂ ಹಗರಣದೊಂದಿಗೆ ತಳಕು ಹಾಕುವುದು ಸರಿಯಲ್ಲ  ಎಂದು ಹೇಳಿದ್ದಾರೆ.

ವ್ಯಾಪಂ ಪರೀಕ್ಷೆ ಮೂಲಕ ಎಸ್ ಐ ಆಗಿ ಆಯ್ಕೆಯಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿಕೆ ನೀಡಿದ್ದು ಈ ಎಲ್ಲಾ ಸಾವುಗಳು ವಿಷಾದನೀಯ. ಆದರೆ ಎಲ್ಲಾ ಸಾವುಗಳಿಗೆ ವ್ಯಾಪಂ ಹಗರಣದೊಂದಿಗೆ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಎಸ್ ಐ ಪರೀಕ್ಷೆ ಪಾಸು ಮಾಡಿ ಪೊಲೀಸ್ ಅಕಾಡೆಮಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ಅನಾಮಿಕ ಖುಶ್ವಾಹ್, ಇಂದು ಬೆಳಗ್ಗೆ 5 ಗಂಟೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ  ಈ ಆತ್ಮಹತ್ಯೆಗೆ ವ್ಯಾಪಂ ಹಗರಣ ಕಾರಣವಲ್ಲ ಎಂದು ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣದಲ್ಲಿ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂಬ ಆರೋಪಗಳಿದ್ದು, ಹಗರಣಕ್ಕೆ ಸಂಬಂಧಪಟ್ಟ ಹಲವು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಹಗರಣಕ್ಕೆ ಸಂಬಂಧ ಪಟ್ಟ ಸಾಕ್ಷಿಗಳು ಸೇರಿದಂತೆ ಈವರೆಗೂ 47 ಜನ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.