ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ
ಶಾಲಾ-ಕಾಲೇಜುಗಳ ಪಠ್ಯಪುಸ್ತಕ ಮುದ್ರಣ ತಡ ವಿರೋಧಿ ಕೇರಳದಲ್ಲಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ಸೋಮವಾರ ಘರ್ಷಣೆ ಏರ್ಪಟ್ಟಿದೆ...

ತಿರುವನಂತಪುರ: ಶಾಲಾ-ಕಾಲೇಜುಗಳ ಪಠ್ಯಪುಸ್ತಕ ಮುದ್ರಣ ತಡ ವಿರೋಧಿ ಕೇರಳದಲ್ಲಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ಸೋಮವಾರ ಘರ್ಷಣೆ ಏರ್ಪಟ್ಟಿದೆ.
ಕೇರಳದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಿ ಹಲವು ದಿನಗಳು ಕಳೆದು ಈವರೆಗೂ ಪಠ್ಯಪುಸ್ತಕಗಳು ಮುದ್ರಣವಾಗಿಲ್ಲ. ಶಿಕ್ಷಣ ಇಲಾಖೆಯ ಈ ಕ್ರಮಕ್ಕೆ ತೀವ್ರ ರೀತಿಯಲ್ಲಿ ಕೆಂಡಾಮಂಡಲವಾಗಿರುವ ವಿದ್ಯಾರ್ಥಿಗಳ ಸಂಘಟನೆಗಳು ಇದೀಗ ಶಿಕ್ಷಣ ಇಲಾಖೆಯ ವಿರುದ್ಧ ತಿರುಗಿ ಬಿದ್ದಿದ್ದು, ಶಿಕ್ಷಣ ಇಲಾಖೆಯ ವಿರುದ್ಧ ಚಂದ್ರಶೇಖರನ್ ನಾಯರ್ ಸ್ಟೇಡಿಯಂ, ಕೋಝಿಕೋಡ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಕೇರಳದಾದ್ಯಂತ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳಿಗೆ ತಡೆಯೊಡ್ಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಕೆಂಡಾಮಂಡಲವಾಗಿದ್ದು, ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದಾರೆ. ನಂತರ ಪ್ರತಿಭಟನೆ ಹಿಂತಾಚಾರಕ್ಕೆ ತಿರುಗಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಟಿ ಚಾರ್ಜ್ ಹಾಗೂ ಜಲ ಫಿರಂಗಿ ಪ್ರಯೋಗ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


