ವ್ಯಾಪಂ ಹಗರಣ: ಶೀಘ್ರ ವಿಚಾರಣೆ ನಡೆಸುವಂತೆ ಕುಮಾರ್ ವಿಶ್ವಾಸ್ ಆಗ್ರಹ
ಮಧ್ಯಪ್ರದೇಶದ ವ್ಯಾಪಂ ಹಗರಣವನ್ನು ಶೀಘ್ರವಾಗಿ ವಿಚಾರಣೆ ನಡೆಸುವಂತೆ ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಸಲ್ಲಿಸಿದ್ದಾರೆ...

ನವದೆಹಲಿ: ಮಧ್ಯಪ್ರದೇಶದ ವ್ಯಾಪಂ ಹಗರಣವನ್ನು ಶೀಘ್ರವಾಗಿ ವಿಚಾರಣೆ ನಡೆಸುವಂತೆ ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಸಲ್ಲಿಸಿದ್ದಾರೆ.
ವ್ಯಾಪಂ ಹಗರಣ ಸಂಬಂಧ ಮಧ್ಯಪ್ರದೇಶ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ತನಿಖೆ ಪ್ರಗತಿಯಲ್ಲಿದ್ದರೂ ಸಹ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೂ 45 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಹಗರಣ ತನಿಖೆಯನ್ನು ಶೀಘ್ರವಾಗಿ ವಿಚಾರಣೆ ನಡೆಸುವಂತೆ ಕುಮಾರ್ ವಿಶ್ವಾಸ್ ಅರ್ಜಿ ಸಲ್ಲಿಸಿದ್ದಾರೆ.
ಇದೇ ವೇಳೆ ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ನಿಗೂಢವಾಗಿ ಸಾವನ್ನಪ್ಪಿದ್ದ ವರದಿಗಾರ ಅಕ್ಷಯ್ ಸಿಂಗ್, ವೈದ್ಯಕೀಯ ಕಾಲೇಜಿನ ಡೀನ್ ಅರುಣ್ ಶರ್ಮಾ ಅವರಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಹಲವು ಮಂದಿ ನಿಗೂಢವಾಗಿ ಸಾವನ್ನಪ್ಪುತ್ತಿದ್ದರು ರಾಜ್ಯ ಸರ್ಕಾರ ಮಾತ್ರ ಪ್ರಕರಣವನ್ನು ಸಿಬಿಐ ತನಿಖೆಯ ಕೈಗೆ ಒಪ್ಪಿಸುತ್ತಿಲ್ಲ. ರಾಜ್ಯ ಸರ್ಕಾರ ತನಿಖಾ ತಂಡದಿಂದ ಜನರಿಗೆ ನ್ಯಾಯಸಿಗುವುದರ ಕುರಿತಂತೆ ಶಂಕೆಗಳಿದ್ದು, ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


