ದೇಶ

ಟರ್ಕಿಶ್ ವಿಮಾನ ತುರ್ತು ಭೂಸ್ಪರ್ಶ: ಹುಸಿ ಬಾಂಬ್ ಕರೆ ಎಂದ ಅಧಿಕಾರಿಗಳು

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಟರ್ಕಿಶ್ ವಿಮಾನದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ, ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ...

ಟರ್ಕಿಶ್ ವಿಮಾನ ತುರ್ತು ಭೂಸ್ಪರ್ಶ: ಹುಸಿ ಬಾಂಬ್ ಕರೆ ಎಂದ ಅಧಿಕಾರಿಗಳು
ಟರ್ಕಿಶ್ ವಿಮಾನ ತುರ್ತು ಭೂಸ್ಪರ್ಶ: ಹುಸಿ ಬಾಂಬ್ ಕರೆ ಎಂದ ಅಧಿಕಾರಿಗಳು (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಟರ್ಕಿಶ್ ವಿಮಾನದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ, ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಟರ್ಕಿಶ್ ಏರ್ ಲೈನ್ಸ್ ಗೆ ಸೇರಿದ ಟಿಕೆ965 ಎಂಬ ವಿಮಾನವು ಬ್ಯಾಂಕಾಕ್ ನಿಂದ ಇಸ್ತಾಂಬೂಲ್ ಪ್ರದೇಶಕ್ಕೆ ತೆರಳುತ್ತಿತ್ತು. ವಿಮಾನದಲ್ಲಿ 148 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನದ ಒಳಭಾಗದಲ್ಲಿರುವ ಶೌಚಾಲಯದ ಕಿಟಕಿ ಗಾಜಿನ ಮೇಲೆ ಅನಾಮಿಕ ವ್ಯಕ್ತಿಯೊಬ್ಬರು ತಮ್ಮ ಲಿಪ್ಸ್ ಟಿಕ್ ನಲ್ಲಿ ಬೆದರಿಕೆ ಸಂದೇಶ ಬರೆದಿದ್ದಾರೆ. ಇದನ್ನು ನೋಡಿದ ವಿಮಾನದ ಸಿಬ್ಬಂದಿಗಳು ಈ ವಿಷಯವನ್ನು ವಿಮಾನದ ಕಂಟ್ರೋಲ್ ರೂಮ್ ಗೆ ರವಾನಿಸಿದ್ದಾರೆ. ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಿಮಾನವು ಇಂದು ಮಧ್ಯಾಹ್ನ ತುರ್ತು ಭೂಸ್ಪರ್ಶ ಮಾಡಿತ್ತು.

ವಿಮಾನದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿದ್ದು,  ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದು, ವಿಮಾನದಲ್ಲಿ ಯಾವುದೇ ತೊಂದರೆಯಿಲ್ಲ. ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಈಗಾಗಲೇ ವಿಮಾನದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಯಭೀತರಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.