ದೇಶ

ವ್ಯಾಪಂ ಹಗರಣವೊಂದು ಸಿಲ್ಲಿ ವಿಚಾರ: ಸದಾನಂದ ಗೌಡ

ವ್ಯಾಪಂ ಹಗರಣವೊಂದು ಸಿಲ್ಲಿ ವಿಚಾರವಾಗಿದ್ದು ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆ ಅಗತ್ಯವಿಲ್ಲ ಎಂದು ಕಾನೂನು ಸಚಿವ ಸದಾನಂದ ಗೌಡ ಅವರು ಮಂಗಳವಾರ ಹೇಳಿದ್ದಾರೆ...

ವ್ಯಾಪಂ ಹಗರಣವೊಂದು ಸಿಲ್ಲಿ ವಿಚಾರ: ಸದಾನಂದ ಗೌಡ
ಕಾನೂನು ಸಚಿವ ಸದಾನಂದ ಗೌಡ
Published On :

ಉದಯ್ಪುರ: ವ್ಯಾಪಂ ಹಗರಣವೊಂದು ಸಿಲ್ಲಿ ವಿಚಾರವಾಗಿದ್ದು ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆ ಅಗತ್ಯವಿಲ್ಲ ಎಂದು ಕಾನೂನು ಸಚಿವ ಸದಾನಂದ ಗೌಡ ಅವರು ಮಂಗಳವಾರ ಹೇಳಿದ್ದಾರೆ.

ವ್ಯಾಪಂ ಹಗರಣದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಸದಾನಂದ ಗೌಡ ಅವರು, ಪ್ರತಿಯೊಂದು ವಿಷಯ ಹಾಗೂ ಘಟನೆಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಬೇಕೆಂದು ಕೇಳುವುದು ಸರಿಯಲ್ಲ. ಕಾನೂನು ಹಾಗೂ ಆದೇಶಗಳು ರಾಜ್ಯದ ವಿಷಯವಾಗಿದ್ದು, ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರ ತನಿಖೆ ನಡೆಸುತ್ತಿದೆ. ಹೀಗಾಗಿ ಪ್ರಕರಣವೊಂದು ಅನಗತ್ಯ ವಿಚಾರವಾಗಿದ್ದು, ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಉನ್ನತ ಹುದ್ದೆಯಲ್ಲಿರುವ ಕಾನೂನು ಸಚಿವರೇ ಈ ರೀತಿಯ ಹೇಳಿಕೆ ನೀಡಿರುವುದು ಇದೀಗ ಪ್ರತಿಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಾನೂನು ಸಚಿವರ ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ಹಗರಣಕ್ಕೆ ಸಂಬಂಧಿಸಿದಂತೆ ನಿಗೂಢ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಗರಣದಲ್ಲಿ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರು ಭಾಗಿಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮ್ ನರೇಶ್ ಯಾದವ್ ಅವರನ್ನು ವಜಾಗೊಳಿಸುವಂತೆ ಸುಪ್ರೀಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು. ಹೀಗಾಗಿ ಪ್ರಕರಣ ಸಂಬಂಧದ ಎಲ್ಲಾ ಅರ್ಜಿ ವಿಚಾರಣೆಯನ್ನು ಜು.9 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.