ಅಮೆರಿಕವನ್ನು ಹಿಂದಿಕ್ಕಿದ ಭಾರತ
ಉಕ್ಕು ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ಜಾಗತಿಕ ಮಟ್ಟದಲ್ಲಿ ಮೂರನೆ ಸ್ಥಾನಕ್ಕೇರಿದೆ ಎಂದು ಕೇಂದ್ರ ಉಕ್ಕು ಮತ್ತು ಗಣಿ ಖಾತೆ...

ನವದೆಹಲಿ: ಉಕ್ಕು ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ಜಾಗತಿಕ ಮಟ್ಟದಲ್ಲಿ ಮೂರನೆ ಸ್ಥಾನಕ್ಕೇರಿದೆ ಎಂದು ಕೇಂದ್ರ ಉಕ್ಕು ಮತ್ತು ಗಣಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ಮಂಗಳವಾರ ತಿಳಿಸಿದ್ದಾರೆ. ಇದುವ ರೆಗೂ ಭಾರತ ನಾಲ್ಕನೆ ಸ್ಥಾನದಲ್ಲಿತ್ತು. ಮುಂದಿನ ಹತ್ತು ವರ್ಷಗಳಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಿ ರುವುದಾಗಿಯೂ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಸಂಸದೀಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ತೋಮರ್, ಭಾರತದ ಉಕ್ಕು ಉದ್ಯಮ ಉತ್ತಮ ಪ್ರಗತಿ ಸಾಧಿಸುತ್ತಿದೆ. ಕಳೆದ ವರ್ಷ ವಿಶ್ವದಲ್ಲಿನ ಕಚ್ಚಾ ಉಕ್ಕು ಉತ್ಪಾದನೆಯಲ್ಲಿ ಭಾರತದ ಪಾಲು ಶೇ.8ಕ್ಕಿಂತಲೂ ಹೆಚ್ಚಾಗಿತ್ತು ಎಂದಿದ್ದಾರೆ. ಆದರೂ ಭಾರತದಲ್ಲಿ ತಲಾ ಉಕ್ಕು ಬಳಕೆ 60 ಕೆಜಿ ಮಾತ್ರ ಇದೆ. ಜಾಗತಿಕ ಮಟ್ಟದಲ್ಲಿ ಈ ಪ್ರಮಾಣ 216 ಕೆಜಿಯಷ್ಟಿದೆ. ಇದು ಭಾರತ ಹೆಚ್ಚಿನ ಪ್ರಮಾಣದ ಉಕ್ಕು ತಯಾರಿಸಲು ಸಾಕಷ್ಟು ಅವಕಾಶಗಳಿವೆ ಎಂಬುದನ್ನು ತೋರಿಸುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟಿದ್ದಾರೆ. ಭಾರತದ ಉಕ್ಕು ಉದ್ಯಮ ವಿಸ್ತರಣೆಯಾಗುತ್ತಿದೆ. ಹಳೆಯ ಘಟಕಗಳನ್ನು ಆಧುನೀಕರಣಗೊಳಿಸುವುದರೊಂದಿಗೆ ವಿಸ್ತರಿಸಲಾಗುತ್ತಿದೆ. ಹೊಸ ಘಟಕಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾ
ಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಎಸ್‍ಎಐಎಲ್‍ನ ಐಐಎಸ್ ಸಿಒ ಉಕ್ಕು ಘಟಕದಲ್ಲಿ 4160 ಕ್ಯೂಬಿಕ್ ಮೀಟರ್‍ನ ಭಾರತದ ಅತಿದೊಡ್ಡ ಬ್ಲಾಸ್ಟ್ ಫರ್ನೇಸ್ ಉದ್ಘಾಟಿಸಿದರು. ಕೆಲವು ಮೌಲ್ಯ ವರ್ಧಿತ ಉತ್ಪನ್ನಗಳನ್ನು ಭಾರತ ಇಂದಿಗೂ ಆಮದು ಮಾಡಿಕೊಳ್ಳುತ್ತಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹೆಚ್ಚಿನ
ಪ್ರಮಾಣದಲ್ಲಿ ಆಗಬೇಕಿದೆ ಎಂದು ತೋಮರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


