ಪದ್ಮ ಪ್ರಶಸ್ತಿಗೆ ಲಲಿತ್ ಮೋದಿ ಹೆಸರು ಶಿಫಾರಸು ಮಾಡಿದ್ದ ವಸುಂಧರಾ ರಾಜೇ
ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ...

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿದ್ದರು ಎಂದು ಬುಧವಾರ ಮಾಧ್ಯಮಗಳು ವರದಿ ಮಾಡಿವೆ.
ವರದಿಗಳ ಪ್ರಕಾರ, ರಾಜೇ ಅವರು ಜುಲೈ 28, 2007ರಲ್ಲಿ ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರ ಹೆಸರು ಶಿಫಾರಸು ಮಾಡಿದ್ದರು.
ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಹಾಗೂ ಉದ್ಯಮಕ್ಕೆ ನೀಡಿದ ಕೊಡುಗೆಗಾಗಿ ಲಲಿತ್ ಮೋದಿಗೆ ಪದ್ಮ ಪ್ರಶಸ್ತಿ ನೀಡುವಂತೆ ರಾಜಸ್ಥಾನ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ವರದಿ ಮಾಡಲಾಗಿದೆ.
ರಾಜಸ್ಥಾನ ಸಿಎಂ ಈಗಾಗಲೇ ಲಲಿತ್ ಮೋದಿ ಅವರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿದ್ದು, ಈ ವರದಿಯಿಂದಾಗಿ ರಾಜೇ ರಾಜಿನಾಮೆಯ ಒತ್ತಡ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


