ವ್ಯಾಪಂ ಹಗರಣ: ನಮ್ರತಾ ದಾಮೋರ್ ಕೇಸ್ ರೀ ಓಪನ್ ಮಾಡುವಂತೆ ಸೂಚನೆ
ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ...

ಉಜ್ಜಯಿನಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ.
ವ್ಯಾಪಂ ಹಗರಣ ಪ್ರಕರಣವು ದೇಶದಾದ್ಯಂತ ಸುದ್ದಿ ಮಾಡುತ್ತಿದ್ದು, ಪ್ರಕರಣ ಸಂಬಂಧ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ವ್ಯಾಪಂ ಹಗರಣದಲ್ಲಿ ಭಾಗಿಯಾಗಿ ನಮ್ರತಾ ದಾಮೋರ್ ಎಂಬ ವಿದ್ಯಾರ್ಥಿನಿ 2009 ರಲ್ಲಿ ಮೆಡಿಕಲ್ ಸೀಟ್ ಪಡೆದುಕೊಂಡಿದ್ದಳು ಎಂದು ಹೇಳಲಾಗುತ್ತಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಯ ಶವ 2012 ರಲ್ಲಿ ಉಜ್ಜಯನಿಯ ರೈಲ್ವೆ ಟ್ರ್ಯಾಕ್ ಬಳಿ ಸಿಕ್ಕಿತ್ತು. ವ್ಯಾಪಂ ಹಗರಣದ ಸುತ್ತ ಹಲವು ಅನುಮಾನಗಳು ಸುತ್ತಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಸಾವನ್ನಪ್ಪಿದ್ದ ವಿದ್ಯಾರ್ಥಿನಿಯ ಪೋಷಕರನ್ನು ಸಂದರ್ಶನ ಮಾಡಲು ಪತ್ರಕರ್ತ ಅಕ್ಷಯ್ ಸಿಂಗ್ ಎಂಬುವವರು ಹೋಗಿದ್ದರು. ಆದರೆ ವರದಿ ವೇಳೆಯಲ್ಲಿ ಅವರು ಸಹ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.
ಹೀಗಾಗಿ ಪ್ರಕರಣ ಸಂಬಂಧ ದೇಶದಾದ್ಯಂತ ಹಲವು ಅನುಮಾನ ಹಾಗೂ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ತನಿಖಾ ತಂಡವು ನಮ್ರತಾ ದಾಮೋರ್ ಅವರ ಸಾವು ಪ್ರಕರಣದ ತನಿಖೆಯನ್ನು ಪುನರಾರಂಭಿಸಲು ಹಿರಿಯ ಅಧಿಕಾರಿಗಳು ಉಜ್ಜಯಿನಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


