ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಪಾಕ್ ಸಮ್ಮತಿ: ಬಿಜೆಪಿಯಿಂದ ಗೆಲುವಿನ ಪ್ರತಿಪಾದನೆ
ಪಾಕ್ ಪ್ರಧಾನಿ ನವಾಜ್ ಷರೀಫ್ ಎಲ್ಲಾ ಸ್ವರೂಪಗಗಳ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವುದಾಗಿ ಭರವಸೆ ನೀಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.

ನವದೆಹಲಿ: ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಎಲ್ಲಾ ಸ್ವರೂಪಗಳ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವುದಾಗಿ ಭರವಸೆ ನೀಡಿರುವುದನ್ನು ಭಾರತದ ಗೆಲುವು ಎಂದು ಬಿಜೆಪಿ ಹೇಳಿದೆ.
ಎಸ್.ಸಿ.ಒ ಶೃಂಗಸಭೆಯ ಸಂದರ್ಭದಲ್ಲಿ ಮೋದಿ- ನವಾಜ್ ಷರೀಫ್ ಮಾತುಕತೆ ನಂತರ ಮಾತನಾಡಿದ ಬಿಜೆಪಿ ರಾಜ್ಯಸಭಾ ಸದಸ್ಯ ಎಂ.ಜೆ ಅಕ್ಬರ್, ಭಾರತ ಹಲವು ದಶಕಗಳಿಂದ ಹೇಳುತ್ತಿದ್ದ ಭಯೋತ್ಪಾದನೆ ವ್ಯಾಖ್ಯಾನವನ್ನು ಪಾಕಿಸ್ತಾನ ಮೊದಲ ಬಾರಿಗೆ ಒಪ್ಪಿಕೊಂಡಿದೆ ಇದು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಯಲ್ಲಿ ಮಹತ್ವದ ತಿರುವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತನ್ನ ನೆಲದಲ್ಲಿ ಭಯೋತ್ಪಾದನೆಯ ಅಸ್ತಿತ್ವವನ್ನೇ ನಿರಾಕರಿಸುತ್ತಿದ್ದ ಪಾಕಿಸ್ತಾನ ಈಗ ತನ್ನ ಎಲ್ಲಾ ಸ್ವರೂಪದ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲು ಒಪ್ಪಿಗೆ ಸೂಚಿಸಿದೆ, ಇದಕ್ಕೂ ಮುನ್ನ ಪಾಕಿಸ್ತಾನ ಭಯೋತ್ಪಾದನೆಯನ್ನು ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂದು ವಿಭಾಗಿಸಿತ್ತು ಎಂದು ಎಂ.ಜೆ ಅಕ್ಬರ್ ಹೇಳಿದ್ದಾರೆ.
26 / 11 ರ ದಾಳಿಗೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸುವುದಾಗಿ ಹೇಳಿರುವ ಪಾಕಿಸ್ತಾನ, ನಮಗೆ ಆಧಾರವಾಗಿದ್ದ ಉಗ್ರಗಾಮಿಗಳ ಧ್ವನಿ ಮಾದರಿಗಳನ್ನು ಒಪ್ಪಿಕೊಂಡಿದೆ ಎಂದು ಎಂ.ಜೆ ಅಕ್ಬರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


