ದೇಶ

ಸೋನಿಯಾ ಗಾಂಧಿ ಇಫ್ತಾರ್ ಕೂಟಕ್ಕೆ ಹೋಗಲ್ಲ: ಲಾಲೂ

ಜುಲೈ 13ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಏರ್ಪಡಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ...

ಸೋನಿಯಾ ಗಾಂಧಿ ಇಫ್ತಾರ್ ಕೂಟಕ್ಕೆ ಹೋಗಲ್ಲ: ಲಾಲೂ
ಸೋನಿಯಾ ಗಾಂಧಿ ಮತ್ತು ಲಾಲು ಪ್ರಸಾದ್ ಯಾದವ್
Published On :

ನವದೆಹಲಿ: ಬಿಹಾರ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಜುಲೈ 13ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಏರ್ಪಡಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ.

ಜುಲೈ 13 ರಂದು ಕೇಂದ್ರ ಸರ್ಕಾರ ಜಾತಿ ಗಣತಿ  ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆರ್ ಜೆ ಡಿ ಪಕ್ಷ ರಾಜಭವನದ ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಜೊತೆಗೆ  ಜುಲೈ 13 ರಂದೇ ಲಾಲೂ ಪ್ರಸಾದ್ ಯಾದವ್ ಕೂಡ ಇಫ್ತಾರ್ ಕೂಟ ಏರ್ಪಡಿಸಿರುವುದರಿಂದ ಸೋನಿಯಾ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಹಾರ ವಿಧಾನಪರಿಷತ್ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಆರ್ ಜೆಡಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲೂ ಪರಾಭವ ಕಾಣುವ ಭೀತಿಯಿಲ್ಲಿದೆ. ಇನ್ನು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಕೂಡ ಇಫ್ತಾರ್ ಕೂಟದಿಂದ ದೂರ ಉಳಿದಿದ್ದಾರೆ. ಉಳಿದಂತೆ ಎಲ್ಲಾ ವಿರೋಧ ಪಕ್ಷಗಳು ಸೋನಿಯಾಗಾಂಧಿ ಇಫ್ತಾರ್ ಕೂಟದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.