ಗನ್ ಪಾಯಿಂಟ್‍ನಲ್ಲಿ ಮಹಿಳೆ ಮೇಲೆ ರೇಪ್: ಎಎಸ್‍ಐ ಸೆರೆ
ಬೇಲಿಯೇ ಎದ್ದು ಹೊಲ ಮೇಯ್ದಂತೆ ದೆಹಲಿಯಲ್ಲಿ ಪೊಲೀಸ್ ಅಧಿಕಾರಿಯೇ ಗನ್‍ನಿಂದ ಹೆದರಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ...

ನವದೆಹಲಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ದೆಹಲಿಯಲ್ಲಿ ಪೊಲೀಸ್ ಅಧಿಕಾರಿಯೇ ಗನ್‍ನಿಂದ ಹೆದರಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಗುರುವಾರ ರಾತ್ರಿ ನಡೆದ ಪ್ರಕರಣ ಶನಿವಾರ ಬೆಳಕಿಗೆ ಬಂದಿದ್ದು, ಸಹಾಯಕ ಸಬ್‍ಇನ್ಸ್‍ಪೆಕ್ಟರ್ (ಎಎಸ್‍ಐ) ಜಗವೀರ್ ಸಿಂಗ್‍ರನ್ನು ಬಂಧಿಸಲಾಗಿದೆ.
ಗುರುವಾರ ರಾತ್ರಿ ಸಿಂಗ್ ಅವರು ಪಶ್ಚಿಮ ದೆಹಲಿಯಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳಿದ್ದರು. ಅಲ್ಲಿ ಪಾನಮತ್ತನಾದ ಸಿಂಗ್ ಅವರು ಸ್ನೇಹಿತನ ಮನೆಯ ಕೆಲಸದಾಕೆ(23)ಗೆ ಪಿಸ್ತೂಲ್ ನಿಂದ ಬೆದರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಎಲ್ಲ ದೃಶ್ಯಾವಳಿಗಳಿರುವ ವಿಡಿಯೋ ಶನಿವಾರ ಮಾಧ್ಯಮಗಳಿಗೆ ಲಭ್ಯವಾಗಿದೆ. ಈ ಬಗ್ಗೆ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದು,
ಅತ್ಯಾಚಾರವಾಗಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಿಂಗ್‍ರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ತನಾಡಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ, ``ನಾವು ಇಲಾಖಾ ತನಿಖೆಗಾಗಿ ಕಾಯುವುದಿಲ್ಲ. ಆತನನ್ನು ಈ ಕೂಡಲೇ ವಜಾ ಮಾಡುತ್ತೇವೆ. ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯವನ್ನೂ ನಾವು ಸಹಿಸುವುದಿಲ್ಲ'' ಎಂದಿದ್ದಾರೆ.
ಇದೇ ವೇಳೆ, ಆಪ್ ಕೂಡ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರ ವಿರುದ್ಧ ಹರಿಹಾಯ್ದಿದೆ. ``ಒಂದು ಕಡೆ ಪೊಲೀಸರು ಆಪ್ ನಾಯಕರನ್ನು ಬಂಧಿಸುವ ಕೆಲಸದಲ್ಲಿ ತೊಡಗಿದ್ದರೆ, ಮತ್ತೊಂದೆಡೆ ಅದೇ ಪೊಲೀಸರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ನಗರದ ಕಾನೂನು ಸುವ್ಯವಸ್ಥೆ ನೋಡಿ ಕೊಳ್ಳಲಾಗದ ಬಸ್ಸಿ ಅವರು ರಾಜಿನಾಮೆ ನೀಡುವುದು ಉತ್ತಮ'' ಎಂದು ಆಪ್ ನಾಯಕ ಆಶಿಶ್ ಖೇತಾನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


