ಭೂಸ್ವಾಧೀನ ವಿಧೇಯಕ ಮುಂದಿನ ವಾರ ಸಿಎಂಗಳ ಜತೆ ಪ್ರಧಾನಿ ಮೋದಿ ಚರ್ಚೆ
ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ...

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮುಂದಿನ ವಾರ ಈ ಸಭೆ ನಡೆಯಲಿದ್ದು, ವಿವಾದಾತ್ಮಕ ಭೂಸ್ವಾಧೀನ ವಿಧೇಯಕದ ಬಗ್ಗೆ ಸಿಎಂಗಳೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ. ಹೇಗಾದರೂ ಮಾಡಿ ಈ ವಿಧೇಯಕದ ವಿಚಾರದಲ್ಲಿ ಒಮ್ಮತ ಮೂಡಿಸಬೇಕೆಂಬುದು ಈ ಸಭೆಯ ಉದ್ದೇಶವಾಗಿದೆ. ಪ್ರಧಾನಿ ಮೋದಿ ಅವರು ಸಂಸತ್‍ನ ಮುಂಗಾರು ಅಧಿವೇಶನ ಆರಂಭವಾಗುವ ಒಂದು ವಾರ ಮೊದಲು ಅಂದರೆ ಜು.15ರಂದು ನೀತಿ ಆಯೋಗದ ಆಡಳಿತ ಮಂಡಳಿಯ ಎರಡನೇ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆಯಾಗಲಿದ್ದು, ಭೂಸ್ವಾಧೀನ ವಿಧೇಯಕಕ್ಕೆ ಆದ್ಯತೆ ನೀಡಲಾಗುವುದು ಎಂದು ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ತಿಳಿಸಿದ್ದಾರೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಭೂಸ್ವಾಧೀನ ವಿಧೇಯಕ, ಸರಕು ಮತ್ತು ಸೇವಾ ತೆರಿಗೆ, ಕಾರ್ಮಿಕ ವಿಧೇಯಕ ಹಾಗೂ ರಾಜಕೀಯ ಹಗರಣಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ದಾಳಿ ನಡೆಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


