ದೇಶ

ಅಸಾರಾಂ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ತಂದೆ ಆಗ್ರಹ

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು ಸೋಮವಾರ ಆಗ್ರಹಿಸಿದ್ದಾರೆ...

ಅಸಾರಾಂ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ತಂದೆ ಆಗ್ರಹ
ಅಸಾರಾಂ ಬಾಪು
Published On :

ಮುಜಾಫರ್ ನಗರ: ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು ಸೋಮವಾರ ಆಗ್ರಹಿಸಿದ್ದಾರೆ.

ಅಸಾರಾಂ ಬಾಪು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿ ಎಂದು ಪರಿಗಣಿಸಲಾಗಿದ್ದ ಅಸಾರಾಂ ಆಶ್ರಮದ ಆಪ್ತ ವ್ಯಕ್ತಿ ಹಾಗೂ ಅಡುಗೆ ಕೆಲಸದಾತ ಅಖಿಲ್ ಗುಪ್ತಾ ಅವರನ್ನು ಜ.12 ರಂದು ಅನುಮಾನಾಸ್ಪದ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಕರಣ ಕುರಿತಂತೆ ಮಾತನಾಡಿರುವ ಮೃತ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು, ಮಗನ ಸಾವಿಗೆ ಸಂಬಂಧಿಸಿದ ಆರೋಪಿಗಳನ್ನು ಹಿಡಿದು ಶಿಕ್ಷಿಸುವಂತೆ ಹಲವು ಬಾರಿ ಸ್ಥಳೀಯ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರೂ,  ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಗುಜರಾತ್ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.