ದೇಶ

ಮಾನಹಾನಿ ಕ್ರಿಮಿನಲ್ ಅಪರಾಧವಾಗಿಯೇ ಇರಲಿ: ಸುಪ್ರೀಂಗೆ ಕೇಂದ್ರ ಸರ್ಕಾರ

ಭಾರತೀಯ ದಂಡಸಂಹಿತೆಯಲ್ಲಿ ಮಾನಹಾನಿಯನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸುವ ಕಲಂ ಅನ್ನು ಉಳಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಹೇಳಿದೆ...

ಮಾನಹಾನಿ ಕ್ರಿಮಿನಲ್ ಅಪರಾಧವಾಗಿಯೇ ಇರಲಿ: ಸುಪ್ರೀಂಗೆ ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್
Published On :

ನವದೆಹಲಿ: ಭಾರತೀಯ ದಂಡಸಂಹಿತೆಯಲ್ಲಿ ಮಾನಹಾನಿಯನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸುವ ಕಲಂ ಅನ್ನು ಉಳಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಬ್ಬರ ಮೇಲೆ ಮಾನಹಾನಿ ಮಾಡುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಪಿಸಿಯ ಕಲಂ 499 ಮತ್ತು 500 ಅನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಕೋರ್ಟ್‍ಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಮಾನಹಾನಿಗೆ ಸಂಬಂಧಿಸಿದ ಅಪರಾಧ ದಂಡ ಸಂಹಿತೆಯ ಕಲಂ 499 ಮತ್ತು 500ರ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಸಲ್ಲಿಸಿತ್ತು. ಈ ನೋಟಿಸ್ ಆಧಾರದ ಮೇಲೆ ಸರ್ಕಾರ ಈ ಅಪಿಢವಿಟ್ ಸಲ್ಲಿಸಿದೆ. ಈ ಮೂವರು ನಾಯಕರು ಐಪಿಸಿಯ 499 ಮತ್ತು 500ನೇ ಕಲಂ ಸಂವಿಧಾನವು ನಾಗರಿಕರಿಗೆ ನೀಡಿದ ಮುಕ್ತ ಸ್ವಾತಂತ್ರ್ಯದ ಹಕ್ಕಿನ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.