ವ್ಯಾಪಂ ಹಗರಣ: ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಜೆಡಿ(ಯು)
ಮಧ್ಯಪ್ರದೇಶದ ಬಹುಕೋಟಿ ಹಾಗೂ ನಿಗೂಢ ಸಾವುಗಳ ಪ್ರಕರಣ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ನೀಡಿದ್ದ ಹೇಳಿಕೆಯನ್ನು ಸಂಯುಕ್ತ ಜನತಾದಳ ಪಕ್ಷ ಸೋಮವಾರ ಖಂಡಿಸಿದೆ...

ನವದೆಹಲಿ: ಮಧ್ಯಪ್ರದೇಶದ ಬಹುಕೋಟಿ ಹಾಗೂ ನಿಗೂಢ ಸಾವುಗಳ ಪ್ರಕರಣ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ನೀಡಿದ್ದ ಹೇಳಿಕೆಯನ್ನು ಸಂಯುಕ್ತ ಜನತಾದಳ ಪಕ್ಷ ಸೋಮವಾರ ಖಂಡಿಸಿದೆ.
ವ್ಯಾಪಂ ಹಗರಣದ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ಅವರು, ಪ್ರಕರಣ ಸಂಬಂಧ ನಮಗೆ ಯಾವುದೇ ರೀತಿಯ ವಿಷಾದವಿಲ್ಲ. ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದರು.
ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಜೆಡಿ(ಯು) ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಅವರು, ಬಿಜೆಪಿ ಪಕ್ಷದ ನಾಯಕರು ನೀಡುತ್ತಿರುವ ಈ ರೀತಿಯ ಹೇಳಿಕೆಗಳು ಸಿಬಿಐ ತನಿಖೆಯ ಮೇಲೆ ಪರಿಣಾಮ ಬೀರಲಿದ್ದು, ಕೂಡಲೇ ಇಂತಹ ಹೇಳಿಕೆ ನೀಡುವುದನ್ನು ನಾಯಕರು ಬಿಡಬೇಕೆಂದು ಹೇಳಿದ್ದಾರೆ.
ಮಧ್ಯಪ್ರದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಿಗೂಢ ಸಾವಿನ ಪ್ರಕರಣ ಬಹುಕೋಟಿ ವ್ಯಾಪಂ ಹಗರಣವನ್ನು ಸಿಬಿಐ ತನಿಖಾ ತಂಡ ಇಂದಿನಿಂದ ತನ್ನ ತನಿಖೆಯನ್ನು ಆರಂಭಿಸಿದ್ದಾರೆ. ತನಿಖಾ ತಂಡದ ಸದಸ್ಯರು ದೆಹಲಿಯಿಂದ ಭೂಪಾಲ್ ಗೆ ತೆರಳಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ವ್ಯಾಪಂ ಹಗರಣವನ್ನು ತನಿಖೆ ನಡೆಸಲು ಸಿಬಿಐ ತಂಡದ 40 ಸದಸ್ಯರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


