26/11 ಮುಂಬೈ ದಾಳಿ: ಮತ್ತಷ್ಟು ಸಾಕ್ಷ್ಯಾಧಾರ ಕೇಳಿದ ಪಾಕಿಸ್ತಾನ
ಮುಂಬೈ ದಾಳಿ ತನಿಖೆ ಚುರುಕುಗೊಳಿಸುವುದಾಗಿ ಭರವಸೆ ನೀಡಿದ್ದ ಪಾಕಿಸ್ತಾನ ಇದೀಗ ಪ್ರಕರಣ ಕುರಿತಂತೆ ವಿಚಾರಣೆ ನಡೆಸಲು ಮತ್ತಷ್ಟು ಸಾಕ್ಷ್ಯಾಧಾರ ಅವಶ್ಯಕತೆಯಿದ್ದು, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಭಾರತಕ್ಕೆ ಸೋಮವಾರ...

ಇಸ್ಲಾಮಾಬಾದ್: ಮುಂಬೈ ದಾಳಿ ತನಿಖೆ ಚುರುಕುಗೊಳಿಸುವುದಾಗಿ ಭರವಸೆ ನೀಡಿದ್ದ ಪಾಕಿಸ್ತಾನ ಇದೀಗ ಪ್ರಕರಣ ಕುರಿತಂತೆ ವಿಚಾರಣೆ ನಡೆಸಲು ಮತ್ತಷ್ಟು ಸಾಕ್ಷ್ಯಾಧಾರ ಅವಶ್ಯಕತೆಯಿದ್ದು, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಭಾರತಕ್ಕೆ ಸೋಮವಾರ ಕೇಳಿದೆ.
ರಷ್ಯಾದ ಉಫಾ ನಗರಿಯಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಪಾಕಿಸ್ತಾನ ರಾಷ್ಟ್ರೀಯ ಭದ್ರತೆ ಸಲಹೆಗಾರ ಸರ್ತಾಜ್ ಅಜಿಜ್ ಅವರು, ಮುಂಬೈ ದಾಳಿ ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪಾಕಿಸ್ತಾನಕ್ಕೆ ಮತ್ತಷ್ಟು ಸಾಕ್ಷ್ಯಾಧಾರಗಳ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ನಡುವೆ ನಡೆದ ಚರ್ಚೆ ಅನೌಚಾರಿಕವಾಗಿದ್ದು, ಚರ್ಚೆಯಲ್ಲಿ ಯಾವುದೇ ರೀತಿಯ ಒಪ್ಪಂದಗಳಾಗಿಲ್ಲ. ಆದರೆ, ಮುಂಬೈ ದಾಳಿ ಕುರಿತಂತೆ ಮತ್ತಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಮೋದಿ ಅವರನ್ನು ನವಾಜ್ ಷರೀಫ್ ಕೇಳಿದ್ದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


