ದೆಹಲಿಯಲ್ಲಿ ಬಡಜನರನ್ನು ತಿರಸ್ಕರಿಸಲಾಗುತ್ತಿದೆ: ರಾಹುಲ್ ಗಾಂಧಿ
ರಾಜ್ಯ ದೆಹಲಿಯಲ್ಲಿ ಬಡ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ರಾಜ್ಯ ದೆಹಲಿಯಲ್ಲಿ ಬಡ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಬೀದಿ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದ್ದು, ಅವರಿಗೆ ಜೀವನ ನಡೆಸಲು ಸರಿಯಾದ ವಾಸಸ್ಥಾನ ಸಿಗುತ್ತಿಲ್ಲ. ಶೆಡ್ ಗಳಲ್ಲಿ ಜೀವನ ನಡೆಸುತ್ತಿದ್ದರು ಸಹ ಆ ಸ್ಥಳವನ್ನು ಕಿತ್ತುಕೊಳ್ಳಲಾಗಿದೆ. ಹೀಗಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರಿಸುವಂತೆ ಬಳಿ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೀದಿ ವ್ಯಾಪಾರಿಗಳನ್ನು ಹಾಗೂ ತಿರುಗು ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಾಗಿದ್ದು, ಶೀಘ್ರದಲ್ಲೇ ಅವರ ಸಮಸ್ಯೆಗಳ ಕುರಿತಂತೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


