ವಾಮಾಚಾರ ಶಂಕೆ: ಒಂದೇ ಕುಟುಂಬದ 6 ಮಂದಿ ಸಾವು
ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ...

ಭುವನೇಶ್ವರ:ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ ಘಟನೆ ಒರಿಸ್ಸಾ ರಾಜ್ಯದ ಕಿಯೋಂಜರ್ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಡೆದಿದೆ.
ದಂಪತಿ ಮತ್ತು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಮಾಚಾರ ನಡೆಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದರಲ್ಲಿ ಸ್ಥಳೀಯ ಅರ್ಚಕನೊಬ್ಬನ ಪಾತ್ರ ಇರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದು, ಇನ್ನುಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 302 ಮತ್ತು 34ರಡಿ ಕೇಸು ದಾಖಲಾಗಿದೆ.
ಕಿಯೋಂಜರ್ ನಿಂದ 70 ಕಿ.ಮೀ ದೂರದಲ್ಲಿ ಜೋಡಾ ಪೊಲೀಸ್ ಸ್ಟೇಷನ್ ನ ಸರಹದ್ದಿನ ಮುಂಡಾ ಸಹಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ವಾಮಾಚಾರ ನಡೆಸಿದ್ದರಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


