ದೇಶ

ವ್ಯಾಪಂ ಹಗರಣ: ಇಂದಿನಿಂದ ಸಿಬಿಐ ತನಿಖೆ ಆರಂಭ

ಮಧ್ಯಪ್ರದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಿಗೂಢ ಸಾವಿನ ಪ್ರಕರಣ ಬಹುಕೋಟಿ ವ್ಯಾಪಂ ಹಗರಣವನ್ನು ಸಿಬಿಐ ತನಿಖಾ ತಂಡ ಸೋಮವಾರ ತನ್ನ ತನಿಖೆಯನ್ನು ಆರಂಭಿಸಿದೆ...

ವ್ಯಾಪಂ ಹಗರಣ: ಇಂದಿನಿಂದ ಸಿಬಿಐ ತನಿಖೆ ಆರಂಭ
ವ್ಯಾಪಂ ಹಗರಣ: ಇಂದಿನಿಂದ ಸಿಬಿಐ ತನಿಖೆ ಆರಂಭ
Published On :

ನವದೆಹಲಿ: ಮಧ್ಯಪ್ರದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಿಗೂಢ ಸಾವಿನ ಪ್ರಕರಣ ಬಹುಕೋಟಿ ವ್ಯಾಪಂ ಹಗರಣವನ್ನು ಸಿಬಿಐ ತನಿಖಾ ತಂಡ ಸೋಮವಾರ ತನ್ನ ತನಿಖೆಯನ್ನು ಆರಂಭಿಸಿದೆ.

ಸುಪ್ರೀಂಕೋರ್ಟ್ ಆದೇಶದಂತೆ ವ್ಯಾಪಂ ಹಗರಣವನ್ನು ತನಿಖೆ ನಡೆಸಲು ಸಿಬಿಐ ತಂಡದ 40 ಸದಸ್ಯರನ್ನು ನೇಮಿಸಲಾಗಿದ್ದು, ಈಗಾಗಲೇ ತನಿಖಾ ತಂಡದ ಸದಸ್ಯರು ದೆಹಲಿಯಿಂದ ಭೂಪಾಲ್ ಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪಂ ಹಗರಣದ ತನಿಖೆಯನ್ನು ಮಧ್ಯಪ್ರದೇಶದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದರೂ, ಪ್ರಕರಣ ಸಂಬಂಧ ಭಾಗಿಯಾಗಿದ್ದ ಆರೋಪಿಗಳು ಹಾಗೂ ಪ್ರಮುಖ ಸಾಕ್ಷಿದಾರರು ಎನ್ನಲಾಗುತ್ತಿದ್ದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಹಲವು ಪ್ರತಿಭಟನೆಗಳು ನಡೆದವು. ಅಲ್ಲದೆ, ವಿರೋಧ ಪಕ್ಷಗಳು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರ ವಿರುದ್ಧ ವ್ಯಾಪಕ ಟೀಕೆಗಳನ್ನು ವ್ಯಕ್ತಪಡಿಸಿ ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದವು.

ಹೀಗಾಗಿ ಮಧ್ಯಪ್ರದೇಶದಲ್ಲಿ ಉಂಟಾದ ಬಿಗು ವಾತಾವರಣದಿಂದಾಗಿ ಶಿವರಾಜ್ ಸಿಂಗ್ ಅವರು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಲು ಒಪ್ಪಿಕೊಂಡಿದ್ದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಧ್ಯಪ್ರದೇಶದ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಸುಪ್ರೀಂಕೋರ್ಟ್ ನ ಒಪ್ಪಿಗೆ ಅಗತ್ಯವಿದೆ ಎಂದು ಹೇಳಿತ್ತು. ಹೀಗಾಗಿ ಜು.8ರಂದು ಶಿವರಾಜ್ ಸಿಂಗ್ ಅವರು ಸುಪ್ರೀಂಕೋರ್ಟ್ ಗೆ ಮನವಿ ಮಾಡಲು ದೆಹಲಿಗೆ ಹೋಗಿದ್ದರು. ಈ ಎಲ್ಲಾ ಬೆಳವಣೆಗಳನ್ನು ಗಮನಿಸಿದ ಸುಪ್ರೀಂಕೋರ್ಟ್ ಜು.9 ರಂದು ವಿಚಾರಣೆ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.