ದೇಶ

ವ್ಯಾಪಂ ಹಗರಣ: ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ಸಚಿವ

ಮಧ್ಯಪ್ರದೇಶದ ಬಹುಕೋಟಿ ಹಗರಣ ನಿಗೂಢ ಸಾವು ಕುರಿತಂತೆ ಯಾವುದೇ ರೀತಿಯ ವಿಷಾದವಿಲ್ಲ ಎಂಬ ಹೇಳಿಕೆ ನೀಡಿ ಇತ್ತೀಚಗಷ್ಟೇ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಚಿವ ನಂದಕುಮಾರ್ ಚೌಹಾಣ್...

ವ್ಯಾಪಂ ಹಗರಣ: ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ಸಚಿವ
ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ನಂದಕುಮಾರ್ ಚೌಹಾಣ್
Published On :

ಭೂಪಾಲ್: ಮಧ್ಯಪ್ರದೇಶದ ಬಹುಕೋಟಿ ಹಗರಣ ನಿಗೂಢ ಸಾವು ಕುರಿತಂತೆ ಯಾವುದೇ ರೀತಿಯ ವಿಷಾದವಿಲ್ಲ ಎಂಬ ಹೇಳಿಕೆ ನೀಡಿ ಇತ್ತೀಚಗಷ್ಟೇ ವಿವಾದಕ್ಕೆ ಸಿಲುಕಿದ್ದ ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ನಂದಕುಮಾರ್ ಚೌಹಾಣ್ ಅವರು ಸೋಮವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಿಗೂಢ ಸಾವುಗಳು ಬೇಸರ ತಂದಿದೆ ಎಂದು ಹೇಳಿದ್ದಾರೆ.

ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಮಧ್ಯಪ್ರದೇಶದ ವ್ಯಾಪಂ ಹಗರಣ ಕುರಿತಂತೆ ಹೇಳಿಕೆ ನೀಡಿದ್ದ ನಂದಕುಮಾರ್ ಚೌಹಾಣ್ ಸಿಂಗ್ ಅವರು, ಪರೀಕ್ಷೆಯಲ್ಲಿ 7 ಲಕ್ಷ ಜನ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಅದರಲ್ಲಿ 2 ಸಾವಿರ ವಿದ್ಯಾರ್ಥಿಗಳಷ್ಟೇ ಅಕ್ರಮವಾಗಿ ಪ್ರವೇಶ ಪಡೆದಿದ್ದರು. 31 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಯಾವುದೇ ರೀತಿಯ ವಿಷಾದ ಪಡುವ ವಿಷಯವಿಲ್ಲ ಎಂದು ಹೇಳಿದ್ದರು.

ಸಚಿವರ ಈ ಹೇಳಿಕೆ ಪ್ರತಿಪಕ್ಷಗಳ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿತ್ತಲ್ಲದೆ, ನಂದಕುಮಾರ್ ಅವರ ವಿವಾದಾತ್ಮಕ ಹೇಳಿಕೆಗೆ ಖಂಡನೆಗಳು ವ್ಯಕ್ತವಾಗಿತ್ತು. ಹೀಗಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ನಂದಕುಮಾರ್ ಚೌಹಾಣ್ ಸಿಂಗ್ ಅವರು, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ನನ್ನ ಹೇಳಿಕೆ ತನಿಖೆ ಕುರಿತಂತಾಗಿತ್ತು. ಹಗರಣ ಸಂಬಂಧ ತನಿಖೆಯಲ್ಲಿ ವಿಷಾದಪಡುವ ವಿಚಾರವಿಲ್ಲ ಎಂದು ಹೇಳಿದ್ದೆ. ಪ್ರಕರಣ ಸಂಬಂಧ ಸಾವಿಗೀಡಾಗುತ್ತಿರುವ ವಿಚಾರ ನಿಜಕ್ಕೂ ಬೇಸರದ ಸಂಗತಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.