ದೇಶ

ಲೋಧಾ ಸಮಿತಿ ತೀರ್ಪಿಗೆ ಬದ್ಧರಾಗಿರುತ್ತೇವೆ: ಬಿಸಿಸಿಐ

ಐಪಿಎಲ್ ನಲ್ಲಿ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಲೋಧಾ ಸಮಿತಿ ನೀಡಿರುವ ತೀರ್ಪನ್ನು ಬಿಸಿಸಿಐ ಸ್ವಾಗತಿಸಿದೆ...

ಲೋಧಾ ಸಮಿತಿ ತೀರ್ಪಿಗೆ ಬದ್ಧರಾಗಿರುತ್ತೇವೆ: ಬಿಸಿಸಿಐ
ಜಗಮೋಹನ್ ದಾಲ್ಮಿಯಾ
Published On :

ನವದೆಹಲಿ: ಐಪಿಎಲ್ ನಲ್ಲಿ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಲೋಧಾ ಸಮಿತಿ ನೀಡಿರುವ ತೀರ್ಪನ್ನು ಬಿಸಿಸಿಐ ಸ್ವಾಗತಿಸಿದೆ.

ನ್ಯಾಯಾಂಗ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ತೀರ್ಪಿನ ಸಂಪೂರ್ಣ ವರದಿ ಓದಿದ ನಂತರ ಮುಂದಿನ ಕ್ರಮದ ಬಗ್ಗೆ ಸರಿಯಾದ ದಿಕ್ಕಿನಲ್ಲಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕ್ರಿಕೆಟ್ ನಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಸ್ವಚ್ಛತೆಯನ್ನು ಬಿಸಿಸಿಐ ಬಯಸುತ್ತದೆ ಎಂದು ದಾಲ್ಮಿಯಾ ಹೇಳಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಸಹ ಇದೇ ಮಾತನ್ನು ಪುನರುಚ್ಛರಿಸಿದ್ದಾರೆ.

ಲೋಧಾ ಸಮಿತಿಯಲ್ಲಿದ್ದ ನ್ಯಾಯಮೂರ್ತಿ ಮುಕುಲ್ ಮುದ್ಗಲ್, ಲೋಧಾ ಸಮಿತಿಯ ಇಂದಿನ ತೀರ್ಪಿನಿಂದ ಜನರಿಗೆ ಐಪಿಎಲ್ ಲೀಗ್ ಮೇಲಿನ ನಂಬಿಕೆಯನ್ನು ಮರುಕಳಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.