ಕೇಜ್ರಿವಾಲ್ ಸರ್ಕಾರದಿಂದ ದೆಹಲಿಯಲ್ಲಿ ಆಮ್ ಆದ್ಮಿ ಕ್ಯಾಂಟೀನ್ ಆರಂಭ
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ದೆಹಲಿಯಲ್ಲಿ 'ಆಮ್ ಆದ್ಮಿ' ಕ್ಯಾಂಟೀನ್ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದೆ.

ದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ದೆಹಲಿಯಲ್ಲಿ 'ಆಮ್ ಆದ್ಮಿ' ಕ್ಯಾಂಟೀನ್ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದೆ.
ವರದಿಗಳ ಪ್ರಕಾರ, ಆಮ್ ಆದ್ಮಿ ಕ್ಯಾಂಟೀನ್ನಲ್ಲಿ ಕೇವಲ 5ರಿಂದ 10ರುಪಾಯಿಗೆ ಊಟ, ತಿಂಡಿ ದೊರೆಯಲಿದೆ.
ಈ ಸಂಬಂಧ ದಹೆಲಿ ಡೈಲಾಗ್ ಕಮಿಷನ್(ಡಿಡಿಸಿ) ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಔಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿಡಿಸಿ ಉಪಾಧ್ಯಕ್ಷ ಆಶಿಶ್ ಖೇತನ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಆಮ್ ಆದ್ಮಿ ಕ್ಯಾಂಟೀನ್ನಲ್ಲಿ 10 ರುಪಾಯಿಗಿಂತ ಕಡಿಮೆ ದರದಲ್ಲಿ ಆಹಾರ ದೊರೆಯಲಿದೆ ಎಂದು ಖೇತನ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಅಮ್ಮಾ ಕ್ಯಾಂಟೀನ್ ಹಾಗೂ ಒಡಿಶಾದಲ್ಲಿನ ಸರ್ಕಾರಿ ಕ್ಯಾಂಟೀನ್ಗಳನ್ನು ಮಾದರಿಯಾಗಿಟ್ಟುಕೊಂಡು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
'ಮುಂದಿನ ಒಂದು ಅಥವಾ ಎರಡು ತಿಂಗಳಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಕ್ಯಾಂಟಿನ್ ಅನ್ನು ಆರಂಭಿಸುವ ಯೋಜನೆ ಇದ್ದು, ಮೊದಲ ಹಂತದಲ್ಲಿ ಆಸ್ಪತ್ರೆ, ಕೈಗಾರಿಕಾ ಪ್ರದೇಶ, ಕಾಲೇಜ್ ಕ್ಯಾಂಪಸ್ ಹಾಗೂ ವಾಣಿಜ್ಯ ಸ್ಥಳಗಳಲ್ಲಿ ಆರಂಭಿಸಲಾಗುವುದು' ಎಂದು ಖೇತನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


