ದೇಶ

ಭೂ ಸ್ವಾಧೀನ ವಿಧೇಯಕ: ಉತ್ತರ ನೀಡಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಭೂ ಸ್ವಾಧೀನ ವಿಧೇಯಕವನ್ನು ಮರು ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ಕಾನೂನು ಪ್ರಶ್ನಿಸಿ ರೈತ ಸಂಘಟನೆಗಳು ಸಲ್ಲಿಸಿರುವ ಅರ್ಜಿಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ...

ಭೂ ಸ್ವಾಧೀನ ವಿಧೇಯಕ: ಉತ್ತರ ನೀಡಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್
Published On :

ನವದೆಹಲಿ: ಭೂ ಸ್ವಾಧೀನ ವಿಧೇಯಕವನ್ನು ಮರು ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ಕಾನೂನು ಪ್ರಶ್ನಿಸಿ ರೈತ ಸಂಘಟನೆಗಳು ಸಲ್ಲಿಸಿರುವ ಅರ್ಜಿಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎಸ್. ಕೇಹಾರ್ ಮತ್ತು ಆದರ್ಶ್ ಕುಮಾರ್ ಗೋಯೆಲ್ ಅವರಿದ್ದ ಸುಪ್ರೀಂಕೋರ್ಟ್ ವಿಭಾಗೀಯ ಪೀಠ, ದೆಹಲಿ ಗ್ರಾಮೀಣ ಸಮಾಜ್ ಎಂಬ ರೈತ ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಇನ್ನು ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ನೊಟೀಸು ಕಳುಹಿಸಿದೆ.

ಜೂನ್ 4 ರಂದು ಕೈ ತಪ್ಪಿ ಹೋದ ನಂತರ ಸೂಕ್ತ ಪರಿಹಾರ ಮತ್ತು ದಕ್ಷತೆಯ ಭೂ ಸ್ವಾಧೀನ, ಪುನರ್ವಸತಿ ತಿದ್ದುಪಡಿ ಮಸೂದೆ 2015 ನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಮರು ಘೋಷಣೆ ಮಾಡಿತ್ತು.

ಕೇಂದ್ರ ಸರ್ಕಾರದ ಭೂ ಸ್ವಾಧೀನ ವಿಧೇಯಕದ ಮರು ಘೋಷಣೆಯು ಅಸಂವಿಧಾನಿಕ ಮತ್ತು ಒಬ್ಬನ ಅಧಿಕಾರದ ಮಿತಿಯನ್ನು ಮೀರಿದ್ದಾಗಿದ್ದು, ಇದರಿಂದ ಅಧಿಕಾರದ ದುರುಪಯೋಗವಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.