ಉಗ್ರರ ಅಡಗುತಾಣದ ಮೇಲೆ ಸೇನಾ ಪಡೆ ದಾಳಿ: ಭಾರೀ ಶಸ್ತ್ರಾಸ್ತ್ರ ವಶ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿದ ಭಾರತೀಯ ರಕ್ಷಣಾ ಪಡೆ...

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿದ ಭಾರತೀಯ ರಕ್ಷಣಾ ಪಡೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶ್ರೀನಗರದಿಂದ 120 ಕಿ.ಮೀ ದೂರದಲ್ಲಿರುವ ಆವೂರಾ, ತ್ರೆಹ್ಗಾಮ್ ಮತ್ತು ಮಹ್ರಾಮಾ ಅರಣ್ಯ ಪ್ರದೇಶದಲ್ಲಿ ರಕ್ಷಣಾ ಪಡೆ ಶೋಧ ಕಾರ್ಯಾಚರಣೆ ನಡೆಸಿದಾಗ ಉಗ್ರರ ಅಡಗುತಾಣ ಪತ್ತೆಯಾಗಿದ್ದು, ದಾಳಿ ನಡೆಸಲಾಗಿದೆ.
ದಾಳಿ ನಡೆಸಲು ಬಳಸುವ 2 ಎಕೆ ಗನ್, 10 ಮ್ಯಾಗ್ ಝೀನ್, 248 ಸುತ್ತು ಹಾರಿಸಬಹುದಾದ 7.6 ಎಂ.ಎಂ ಮಲ್ಟಿ ಮೆಷಿನ್ ಗನ್, ಮತ್ತೆರಡು ನಿಯತಕಾಲಿಕ ಹಾಗೂ 2 ಪಿಸ್ತೂಲ್, ಗ್ರೆನೇಡ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಇದುವರೆಗೂ ಯಾರೊಬ್ಬರನ್ನು ಬಂಧಿಸಿದ ವರದಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


