ದೇಶ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ

ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಕಳೆದ 12 ಗಂಟೆಗಳಲ್ಲಿ ಎರಡನೇ ಬಾರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಗಡಿ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ
ಸಾಂದರ್ಭಿಕ ಚಿತ್ರ
Published On :

ಜಮ್ಮು: ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಕಳೆದ 12 ಗಂಟೆಗಳಲ್ಲಿ ಎರಡನೇ ಬಾರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ.

ಪೂಂಚ್ ಸೆಕ್ಟರ್‌ನ ಶಾಹ್‌ಪುರ್ ಕೇರ್ನಿ ಪ್ರದೇಶದಲ್ಲಿ ಭಾರತೀಯ ಸೈನಿಕರ ಮೇಲೆ ಪಾಕ್ ಅಪ್ರಚೋದಿತ ದಾಳಿ ನಡೆಸಿದ ಎಂದು ಅಧಿಕಾರಿ ಹೇಳಿದ್ದಾರೆ.

ಇಂದು ಮಧ್ಯಾಹ್ನ 1.50ರ ಸುಮಾರಿಗೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಲು ಆರಂಭಿಸಿತು. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಗುಂಡಿನ ದಾಳಿ ಮಾಡಿದ್ದಾರೆ.

ಕಳೆದ ರಾತ್ರಿ 9.25ರ ಸುಮಾರಿಗೆ ರಾಜೌರಿ ಜಿಲ್ಲೆಯ ನೌಶೆರಾ ಪ್ರದೇಶದಲ್ಲಿ ಪಾಕ್ ಸೇನಾಪಡೆ ಭಾರತೀಯ ಯೋಧರ ಮೇಲೆ ಅಪ್ರಚೋದಿತ ದಾಳಿ ನಡೆಸಿತ್ತು. ಇಂದು ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.