ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ
ದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು 9 ಜನ ಸಾವನ್ನಪ್ಪಿದ್ದು 13 ಜನರಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ...

ನವದೆಹಲಿ : ದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು 9 ಜನ ಸಾವನ್ನಪ್ಪಿದ್ದು 6 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪಶ್ಚಿಮ ದೆಹಲಿ ಠಾಣಾ ಪೊಲೀಸ್ ಜಂಟಿ ಆಯುಕ್ತ ದೀಪೇಂದ್ರ ಪಾಟಕ್ ತಿಳಿಸಿದ್ದಾರೆ.
ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
ಅವಶೇಷಗಳ ಅಡಿ ಇನ್ನು 10 ಜನ ಸಿಲುಕಿರುವ ಸಾಧ್ಯತೆಯಿದ್ದು 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 8 ಕ್ಕೂ ಹೆಚ್ಚು ಅಗ್ನಿಶಾಮಕದಳದ ತಂಡಗಳು ಮತ್ತು ಎನ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.
ಈ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಜನವಸತಿ ಪ್ರದೇಶದಲ್ಲೇ ಇಂಥ ಅವಘಡ ಸಂಭವಿಸಿರುವುದು ನಾಗರಿಕರಲ್ಲಿ ಭಯ ಹುಟ್ಟುಹಾಕಿದೆ. ಇದು ಕಾನೂನು ಬಾಹಿರವಾಗಿ ನಿರ್ಮಾಣವಾದ ಕಟ್ಟಡವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ 2 ಲಕ್ಷ ರು. ಮತ್ತು ಗಾಯಾಳುಗಳಿಗೆ 50 ಸಾವಿರ ಪರಿಹಾರ ಧನವನ್ನು ದೆಹಲಿ ಸರ್ಕಾರ ಘೋಷಣೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


