ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ: ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲು
ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ...

ನವದೆಹಲಿ: ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಮ್ ಆದ್ಮಿ ಪಕ್ಷದ ಜಾಹೀರಾತು ವಿವಾದ ಕುರಿತಂತೆ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಂದರ್ಶನದ ವೇಳೆ ದೆಹಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದು, ಪೊಲೀಸರನ್ನು ತುಲ್ಲಾ ಎಂದು ಕರೆದಿದ್ದಾರೆ. ದೆಹಲಿ ತುಲ್ಲಾ (ಪೊಲೀಸ್) ರು ರಸ್ತೆಬದಿಯಲ್ಲಿಯೇ ಭ್ರಷ್ಟಾಚಾರ ನಡೆಸುತ್ತಿರುತ್ತಾರೆ. ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಅಂತಹ ಪೊಲೀಸರ ವಿರುದ್ಧ ನಾವು ದೂರು ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು.
ಈ ಸಂದರ್ಶನದ ವೇಳೆ ಅರವಿಂದ ಕೇಜ್ರಿವಾಲ್ ಅವರು ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಸಿರುವುದರ ವಿರುದ್ಧ ದೆಹಲಿ ಪೊಲೀಸರು ಇದೀಗ ಮಾನನಷ್ಟ ಮೊಕದ್ದಮೆ ಮೇರೆಗೆ ಗೋಬಿಂದ್ ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಜ್ರಿವಾಲ್ ಅವರ ಹೇಳಿಕೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಅವರು, ಕೇಜ್ರಿವಾಲ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ರೀತಿಯ ಹೇಳಿಕೆ ನೀಡಿರುವುದು ಸತ್ಯವೇ ಆದರೆ ಇದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


