ಅಕ್ಟೋಬರ್ ನಲ್ಲಿ ಯಹೂದಿ ದೇಶಕ್ಕೆ ರಾಷ್ಟ್ರಪತಿ ಪ್ರವಾಸ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಂಬರುವ ಅಕ್ಟೋಬರ್ ನಲ್ಲಿ ಇಸ್ರೇಲ್, ಪ್ಯಾಲೆಸ್ತೀನ್ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ..

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಂಬರುವ ಅಕ್ಟೋಬರ್ ನಲ್ಲಿ ಇಸ್ರೇಲ್, ಪ್ಯಾಲೆಸ್ತೀನ್ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಜೋರ್ಡಾನ್ ಗೂ ಭೇಟಿ ನೀಡೋ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೊದಿ ಈ ವರ್ಷದ ಜೂನ್ ನಲ್ಲಿ ಇಸ್ರೇಲ್ , ಪ್ಯಾಲೇಸ್ತೆನ್ ಹಾಗೂ ಮತ್ತು ಜೊರ್ಡಾನ್ ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದರು. ಆದರೆ ಆರ್ ಎಸ್ ಎಸ್ ವಿರೋಧದಿಂದಾಗಿ ಮೋದಿ ಪ್ರವಾಸ ರದ್ದುಗೊಳಿಸಲಾಯ್ತು.
ಹೀಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಂದಿನ ಅಕ್ಟೋಬರ್ ನಲ್ಲಿ ಯೆಹೂದಿ ರಾಷ್ಟ್ರದಲ್ಲೂ ಪ್ರವಾಸ ಕೈಗೊಳ್ಳಲಿದ್ದಾರೆ. ಇಸ್ರೇಲ್ ಸ್ವತಂತ್ರ್ಯ ರಾಷ್ಟ್ರವಾದ ನಂತರ 1992 ರಲ್ಲಿ ಭಾರತ ಇಸ್ರೇಲ್ ಜೊತೆ ಪೂರ್ಣ ಪ್ರಮಾಣದ ರಾಜತಾಂತ್ರಿಕ ಸಂಬಂಧ ಹೊಂದಿತ್ತು.
ಭಾರತ ರತ್ನ ಮಾಜಿ ಪ್ರಧಾನಿ ವಾಜಪೇಯಿ ಅವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಎಲ್.ಕೆ ಅಡ್ವಾಣಿ ಕೂಡ ಇಸ್ರೇಲ್ ಗೆ ಭೇಟಿ ನೀಡಿದ್ದರು. ಹಾಗೆಯೇ ಜಸ್ವಂತ್ ಸಿಂಗ್ ಮತ್ತು ಎಸ್.ಎಂ ಕೃಷ್ಣ ಕೂಡ ಇಸ್ರೇಲ್ ಯಹೂದಿ ರಾಷ್ಟ್ರದ ಪ್ರವಾಸ ಕೈಗೊಂಡಿದ್ದರು. ಇತ್ತೀಚೆಗೆ ಗೃಹಸಚಿವ ರಾಜನಾಥ್ ಸಿಂಗ್ ಕೂಡ ಇಸ್ರೇಲ್ ಪ್ರವಾಸ ಕೈಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


