ದೇಶ

ವಾಣಿಜ್ಯ ನಗರಿ ಮುಂಬಯಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಧಾರಾಕಾರ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬಯಿ ಮತ್ತೆ ತತ್ತರಿಸಿದೆ, ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ....

ವಾಣಿಜ್ಯ ನಗರಿ ಮುಂಬಯಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
ಜಲಾವೃತಗೊಂಡಿರುವ ಪ್ರದೇಶ
Published On :

ಮುಂಬಯಿ:ಧಾರಾಕಾರ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬಯಿ ಮತ್ತೆ ತತ್ತರಿಸಿದೆ, ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ಮುಂಬಯಿನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಛತ್ರಪತಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣ ಸುಮಾರು 15 ನಿಮಿಷ ತಡವಾಗಿ ಪ್ರಯಾಣ ಆರಂಭವಾಯಿತು. ಆದರೆ ಯಾವುದೇ ವಿಮಾನ ಪ್ರಯಾಣ ರದ್ದಾಗಿಲ್ಲ. ಇನ್ನು ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇನ್ನು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ, ಮಳೆಯಿಂದಾಗಿ ಬಾಂದ್ರಾ ಲಿಂಕ್ ರೋಡ್ ನಲ್ಲಿರುವ ಪಾದರಕ್ಷೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಆದರೆ ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ 445 ಮಿ,ಮೀ ಮಳೆಯಾಗಿರುವ ವರದಿಯಾಗಿದ್ದು, ಪಲ್ಗಾರ್ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಅಹಮದಾಬಾದ್ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲು ಸಂಚಾರ ರದ್ದಾಗಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.