ಗುರುವಾಯೂರು ದೇವಸ್ಥಾನಕ್ಕೆ ಬಾಂಬ್ ಬೆದರಿಕೆ
ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ...

ತ್ರಿಶ್ಶೂರ್: ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ. ಈ ಸಂದೇಶ ಖತ್ತರ್ ನಿಂದ ಬಂದಿರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಗುರುವಾಯೂರ್ ನ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಮಂಗಳವಾರ ಬೆಳಗ್ಗೆ ಫೋನ್‌ಗೆ ಕರೆ ಮಾಡಿದ ದುಷ್ಕರ್ಮಿಗಳು 24 ಗಂಟೆಯೊಳಗೆ ದೇವಾಲಯದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.
ಬೆದರಿಕೆ ಕರೆ ಮಾಡಿದವರು ಮಲಯಾಳಂ ಭಾಷೆಯಲ್ಲಿ ಮಾತನಾಡಿದ್ದು, ಕೆಲವರ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ. ಆದಾಗ್ಯೂ, ಪೊಲೀಸ್ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿಷಯಗಳನ್ನು ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಗುರುವಾಯೂರ್ ದೇವಾಲಯದ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರನ್ನು ತೀವ್ರ ತಪಾಸಣೆಗೊಳಪಡಿಸಿದ ನಂತರವೇ ಒಳಗೆ ಬಿಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


