ಮಾಟ ಮಾಡುತ್ತಿದ್ದಾಳೆಂದು ಶಂಕಿಸಿ ಮಹಿಳೆ ಶಿರಚ್ಛೇದ ಮಾಡಿದ ಗ್ರಾಮಸ್ಥರು
ಮಾಟ ಮಾಡುತ್ತಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಅಸ್ಸಾಂನ ಸೋನಿತ್‍ಪುರದಲ್ಲಿ 60 ವರ್ಷದ ಮಹಿಳೆ ತಲೆ ಕತ್ತರಿ ಹಾಕಲಾಗಿದೆ. ಕೂಡಲೇ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ...

ತೇಜ್‍ಪುರ್(ಅಸ್ಸಾಂ): ಮಾಟ ಮಾಡುತ್ತಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಅಸ್ಸಾಂನ ಸೋನಿತ್‍ಪುರದಲ್ಲಿ 60 ವರ್ಷದ ಮಹಿಳೆ ತಲೆ ಕತ್ತರಿ ಹಾಕಲಾಗಿದೆ. ಕೂಡಲೇ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಘಟನೆಯ ಬಗ್ಗೆ ವಿವರಣೆ ನೀಡಿರುವ ಬಿಸ್ವನಾಥ್ ಚಿರಾಲಿ ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ದೇವ್ ರಾಯ್, ವಿಮಜುಲಿ ಗ್ರಾಮದಲ್ಲಿರುವ ಮಹಿಳೆಯ ಮನೆಗೆ ನುಗ್ಗಿದ 200ಕ್ಕೂ ಅಧಿಕ ಗ್ರಾಮಸ್ಥರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದರು.
ಸ್ಥಳೀಯರು ಮಹಿಳೆಯ ಮನೆಗೆ ನುಗ್ಗಿ ಆಕೆಗೆ ಮನ ಬಂದಂತೆ ಥಳಿಸಿದರು. ಇದಾದ ಬಳಿಕ ಹರಿತವಾದ ಆಯುಧದಿಂದ ತಲೆಯನ್ನು ಕಡಿದು ಹಾಕಿದರು. ಸುದ್ದಿ ತಿಳಿಯುತ್ತಲೇ ಪೊಲೀಸರು ಗ್ರಾಮಕ್ಕೆ ಧಾವಿಸಿದರು. ಆದರೆ ಉದ್ರಿಕ್ತ ಜನರು ಪೊಲೀಸರ ಪ್ರವೇಶಕ್ಕೆ ತಡೆಯೊಡ್ಡಿದರು ಎಂದು ರಾಯ್ ತಿಳಿಸಿದ್ದಾರೆ. ಇದರ ಹೊರತಾಗಿಯೂ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತಂಡ ಜನರ ಗುಂಪನ್ನು ಚದುರಿಸಿದರು. ಸ್ಥಳದಿಂದ ಆಯುಧ ಮತ್ತು ಮಹಿಳೆಯ ಮೃತ ದೇಹ ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


