ದೇಶ

ಲಲಿತ್ ಮೋದಿಗೆ ಜಾಮೀನುರಹಿತ ವಾರೆಂಟ್ ನೀಡಿ-ಜಾರಿ ನಿರ್ದೇಶನಾಲಯ

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಗಡುವು ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ...

ಲಲಿತ್ ಮೋದಿಗೆ ಜಾಮೀನುರಹಿತ ವಾರೆಂಟ್ ನೀಡಿ-ಜಾರಿ ನಿರ್ದೇಶನಾಲಯ
ಲಲಿತ್ ಮೋದಿ
Published On :

ನವದೆಹಲಿ: ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಗಡುವು ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಲಲಿತ್ ಮೋದಿ ವಿರುದ್ಧ ಜಾಮೀನು ರಹಿತ ವಾರೆಂಟ್ ನೀಡುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಹಣ ದುರ್ಬಳಕೆ ಆರೋಪ ಎದುರಿಸುತ್ತಿರುವ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯ ಖುದ್ದು ಜುಲೈ 20ರೊಳಗೆ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿತ್ತು. 2010 ರಿಂದ ಲಂಡನ್ ನಲ್ಲಿ ವಾಸವಿರುವ ಲಲಿತ್ ಮೋದಿ ಜಾರಿ ನಿರ್ದೇಶನಾಲಯದ ನೊಟೀಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ.

2008ರ ಐಪಿಎಲ್ ಪಂದ್ಯಾವಳಿ ಪ್ರಸಾರದ ಹಕ್ಕು ವಿತರಣೆಯಲ್ಲಿ 425 ಕೋಟಿ ಡೀಲ್ ಸಂಬಂಧ ಲಲಿತ್ ಮೋದಿ ವಿರುದ್ಧ ದೂರು ದಾಖಲಾಗಿತ್ತು. ಜಾರಿ ನಿರ್ದೇಶನಾಲಯ ದೂರಿನ ಹಿನ್ನೆಲೆಯಲ್ಲಿ 2009 ರಲ್ಲಿ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.