ದೇಶ

ರೈತರ ಆತ್ಮಹತ್ಯೆ: 27ರಂದು ರಾಜ್ಯಕ್ಕೆ ರಾಹುಲ್ ಆಗಮನ?

ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜು.27ರಂದು ರಾಜ್ಯಕ್ಕೆ...

ರೈತರ ಆತ್ಮಹತ್ಯೆ: 27ರಂದು ರಾಜ್ಯಕ್ಕೆ ರಾಹುಲ್ ಆಗಮನ?
ರಾಹುಲ್ ಗಾಂಧಿ
Published On :

ಬೆಂಗಳೂರು: ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜು.27ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಡಾ.ಚಲ್ಲಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹಾಗೂ ರಾಹುಲ್ ಗಾಂಧಿ ಅವರಿಗೆ ವರದಿ ಸಲ್ಲಿಸಿದ್ದು, ಕರ್ನಾಟಕಕ್ಕೆ ಭೇಟಿ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಜು.27ರಂದು ಭಾನುವಾರ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದ ಒಂದು ಕಡೆ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಒಂದು ಕಡೆ ರೈತರು ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಅವರು ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಸಂಭಾವ್ಯ ಸ್ಥಳಗಳ ಪರಿಶೀಲನೆಗೆ ಹೊರಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈ.ಟಿ.ಹೊನ್ನಟ್ಟ, ಮೇದೂರು,ಚೌಡಯ್ಯದಾನಪುರ, ಅರೆಮಲ್ಲಾಪುರ, ಹಿರೇಕೆರೂರು ತಾಲೂಕಿನ ಸಣ್ಣಗುಬ್ಬಿ, ಅಲದಗೇರಿ, ಆಲಿಕಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.