ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ
1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3 ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


