ದೇಶ

ಮೋದಿ ಅಣತಿಯಂತೆ ನಜೀಬ್ ಜಂಗ್ ವರ್ತಿಸುತ್ತಿದ್ದಾರೆ: ಕೇಜ್ರಿವಾಲ್

ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ಪ್ರದಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು .....

ಮೋದಿ ಅಣತಿಯಂತೆ ನಜೀಬ್ ಜಂಗ್ ವರ್ತಿಸುತ್ತಿದ್ದಾರೆ: ಕೇಜ್ರಿವಾಲ್
ಕೇಜ್ರಿವಾಲ್ ಮತ್ತು ನಜೀಬ್ ಜಂಗ್
Published On :

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ಪ್ರದಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಸಂಬಂಧ ನಜೀಬ್ ಜಂಗ್ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಒಬ್ಬ ವ್ಯಕ್ತಿ  ಸರ್ಕಾರವಾಗಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ. ಒಬ್ಬ ವ್ಯಕ್ತಿ ತಾನೇ ಸರ್ಕಾರ ಎಂದು ಘೋಷಿಸಿಕೊಂಡರೇ ಜನಾದೇಶ ಪಡೆದು ಎಲ್ಲಾ ಸೀಟುಗಳಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡಿರುವ ನಾವು ಏನು ಎಂದು ಕೇಜ್ರಿವಾಲ್ ನಜೀಬ್ ಜಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಸರ್ಕಾರದ ಎಲ್ಲಾ ವಿಷಯಗಳಲ್ಲೂ ಮೂಗು ತೂರಿಸುತ್ತಿರುವ ನಜೀಬ್ ಜಂಗ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾಗಿ ನೇಮಕವಾಗಿರುವ ಸ್ವಾತಿ ಮಲವಾಲಿ ಅವರಿಗೆ ಬರೆದಿರುವ ಪತ್ರದಲ್ಲಿ ನಾನೇ ಸರ್ಕಾರ ಎಂದು ಗವರ್ನರ್ ನಜೀಬ್ ಜಂಗ್ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.