ದೇಶ

ಗಲ್ಲು ಶಿಕ್ಷೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಯಾಕುಬ್ ಮೆಮನ್

ಮರಣದಂಡನೆ ವಿರೋಧಿಸಿರುವ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದಾಗಿ ಗುರುವಾರ ತಿಳಿದುಬಂದಿದೆ...

ಗಲ್ಲು ಶಿಕ್ಷೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಯಾಕುಬ್ ಮೆಮನ್
ಯಾಕುಬ್ ಮೆಮನ್
Published On :

ನವದೆಹಲಿ: ಮರಣದಂಡನೆ ವಿರೋಧಿಸಿರುವ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದಾಗಿ ಗುರುವಾರ ತಿಳಿದುಬಂದಿದೆ.

ನ್ಯಾಯಾಲಯದ ತೀರ್ಪು ಈ ಮೊದಲೇ ನಿರ್ಧಾರ ಕೈಗೊಂಡಂತೆಯಿದೆ.  ಜುಲೈ.30 ರಂದು ಮರಣದಂಡನೆ ವಿಧಿಸುವುದಾಗಿ ನೀಡಿರುವ ಶಿಕ್ಷೆಯು ಕಾನೂನಾತ್ಮಕವಾಗಿ ವಿರೋಧವಾಗಿದ್ದು, ನ್ಯಾಯಾಲಯವು ಕಾನೂನಾತ್ಮಕ ತನ್ನ ತತ್ವಗಳನ್ನು ಪಾಲಿಸದೆ ಶಿಕ್ಷೆ ವಿಧಿಸಿದೆ ಎಂದು ಹೇಳಿದ್ದಾನೆ. .

ಈ ಹಿಂದೆ ಯಾಕುಬ್‌ ಮೆಮನ್‌ಗೆ ವಿಶೇಷ ಟಾಡಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. 2013ರಲ್ಲಿ ಇದನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿತ್ತು. ಯಾಕುಬ್‌ ಮೆಮನ್‌ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದನು. ಮಹಾರಾಷ್ಟ್ರ ಸರ್ಕಾರ ನೀಡಿದ ವರದಿಯ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.

ಯಾಕುಬ್‌ ಮೆಮನ್‌ ಭೂಗತ ಪಾತಕಿ ಟೈಗರ್‌ ಮೆಮನ್‌ ಸಹೋದರನಾಗಿದ್ದು, 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟದಲ್ಲಿ 250 ಜನರು ಸಾವನ್ನಪ್ಪಿದ್ದರು. ಸುಮಾರು 700 ಜನ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.