ದೇಶ

"ಪ್ಲೀಸ್, ನಮ್ಮನ್ನು ಕೆಲಸ ಮಾಡಲು ಬಿಡಿ"

ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳ ನಡುವೆ ಮತ್ತೊಂದು ವಿವಾದ ಉಂಟಾಗುವ ಸಾಧ್ಯತೆಯಿದ್ದು, ಆಪ್ ಅದರ ಆಡಳಿತದಲ್ಲಿ ಮೂಗು ತೂರಿಸದಂತೆ ಕೇಂದ್ರ...

"ಪ್ಲೀಸ್, ನಮ್ಮನ್ನು  ಕೆಲಸ ಮಾಡಲು ಬಿಡಿ"
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್(ಸಂಗ್ರಹ ಚಿತ್ರ)
Published On :

ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳ ನಡುವೆ ಮತ್ತೊಂದು ವಿವಾದ ಉಂಟಾಗುವ ಸಾಧ್ಯತೆಯಿದ್ದು, ತಮ್ಮ ಆಡಳಿತದಲ್ಲಿ ಮೂಗು ತೂರಿಸದಂತೆ ಕೇಂದ್ರ ಸರ್ಕಾರವನ್ನು ಆಪ್ ಕೋರಿದೆ. ಅದರಷ್ಟಕ್ಕೆ ಕೆಲಸ ಮಾಡಲು ಬಿಡುವಂತೆ ಹೇಳಿ ಭಿತ್ತಿಪತ್ತವನ್ನು ಅದು ಅಂಟಿಸಿದೆ.

ದೆಹಲಿ ಸಚಿವಾಲಯದ ಹೊರಗೆ ಈ ಪೋಸ್ಟರ್ ನ್ನು ಅಂಟಿಸಲಾಗಿದ್ದು, ಅದರಲ್ಲಿ ''ಪಿಎಂ ಸರ್, ದೆಹಲಿ ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ, ಅದು ಚೆನ್ನಾಗಿ ಕೆಲಸ ಮಾಡುತ್ತದೆ'' ಎಂದು ಬರೆಯಲಾಗಿದೆ.

ಇದೇ ಸಂದರ್ಭದಲ್ಲಿ ಅದು, ಕೇಂದ್ರ ಸರ್ಕಾರದ ಜೊತೆ ನಡೆಸುವ ಜಗಳವಲ್ಲ ಎಂದು ಸಮರ್ಥಿಸಿಕೊಂಡಿದೆ.

ಈ ಬಗ್ಗೆ  ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ದೆಹಲಿ ಸರ್ಕಾರದ ಎಲ್ಲಾ ವಿಷಯಗಳಲ್ಲಿಯೂ ಮಧ್ಯಪ್ರವೇಶಿಸುತ್ತದೆ, ನಮ್ಮನ್ನು ನಮ್ಮಷ್ಟಕ್ಕೆ ಕೆಲಸ ಮಾಡಲು ಬಿಡುವುದಿಲ್ಲ. ಇದರಿಂದ ನಮಗೆ ತೊಂದರೆಯಾಗುತ್ತಿದೆ. ಅದಕ್ಕೆ ನಾವು ಅವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಈ ಹಿಂದೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಮೋದಿಯವರ ಪರವಾಗಿ ತಾವು ಕೆಲಸ ಮಾಡುತ್ತಿದ್ದೀರೆಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.