ಸಿಅರ್‌ಪಿಎಫ್ ಕಟ್ಟಡದಲ್ಲಿ ಬೆಂಕಿ: ಓರ್ವ ಪೇದೆ ಸಜೀವ ದಹನ
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಅರ್‌ಪಿಎಫ್) ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ ಓರ್ವ ಪೇದೆ ಸಜೀವ ದಹನವಾಗಿರುವ ಘಟನೆ ದೆಹಲಿಯ ಆರ್.ಕೆ.ಪುರಂ ಪ್ರದೇಶದಲ್ಲಿ ಶನಿವಾರ ನಡೆದಿದೆ...

ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಅರ್‌ಪಿಎಫ್) ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ ಓರ್ವ ಪೇದೆ ಸಜೀವ ದಹನವಾಗಿರುವ ಘಟನೆ ದೆಹಲಿಯ ಆರ್.ಕೆ.ಪುರಂ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಸಿಅರ್‌ಪಿಎಫ್ ಕಟ್ಟಡದ 4ನೇ ಹಂತದ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಪೇದೆಯೊಬ್ಬರು ಮಲಗಿಕೊಂಡಿದ್ದರು. ಬೆಂಕಿ ಕಾಣಿಸಿಕೊಂಡ ನಂತರ ಸ್ಥಳೀಯರು ಕೂಗಾಡಿದರೂ ಪೇದೆ ಗಾಢ ನಿದ್ದೆಯಲ್ಲಿದ್ದ ಕಾರಣ ಆತನಿಗೆ ಕೇಳಿಸಿಲ್ಲ. ಹೀಗಾಗಿ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ 7 ಅಗ್ನಿ ಶಾಮಕ ವಾಹದೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಘಟನೆಯಲ್ಲಿ ಇಲಾಖೆಗೆ ಸೇರಿದ ಹಲವಾರು ದಾಖಲೆಗಳು ನಾಶಗೊಂಡಿದ್ದು, ಕಟ್ಟಡದಲ್ಲಿನ ಸಾಕಷ್ಟು ವಸ್ತುಗಳು ಹಾನಿಗೊಳಗಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


