ಬಿಹಾರ ಚುನಾವಣಾಪೂರ್ವ ಸಮೀಕ್ಷೆ: ನಿತೀಶ್-ಲಾಲು ಮೈತ್ರಿಗೆ ಬಹುಮತ, ಮೋದಿಗೆ ಶಾಕ್
ಬಿಹಾರ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಹೇರುತ್ತಿದೆ. ಈ ಮಧ್ಯೆ ಜೆಡಿಯು- ಆರ್‌ಜೆಡಿ ಮೈತ್ರಿಕೂಟವು ಬಹುಮತ ಪಡೆಯಲಿದೆ ಎಂಬ ಚುನಾವಣಾಪೂರ್ವ...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಹೇರುತ್ತಿದೆ. ಈ ಮಧ್ಯೆ ಜೆಡಿಯು- ಆರ್‌ಜೆಡಿ ಮೈತ್ರಿಕೂಟವು ಬಹುಮತ ಪಡೆಯಲಿದೆ ಎಂಬ ಚುನಾವಣಾಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಬಿಜೆಪಿಗೆ ಶಾಕ್ ನೀಡಿದೆ.
ಬಿಹಾರದಲ್ಲಿ ನಿನ್ನೆಯಷ್ಟೇ ಚುನಾವಣಾ ಪ್ರಚಾರ ಮಾಡಿ ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಸಿವಿಸಿಗೆ ಕಾರಣವಾಗಿದೆ. ಎಬಿಪಿ ನ್ಯೂಸ್-ನೀಲ್ಸನ್ ನಡೆಸಿರುವ ಸಮೀಕ್ಷೆ ಪ್ರಕಾರ ಒಟ್ಟು 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅವಶ್ಯಕತೆಯಿದೆ. ಜೆಡಿಯು-ಆರ್‌ಜೆಡಿ ಕೂಟ 129 ಸ್ಥಾನ ಪಡೆಯುವ ಸಾಧ್ಯತೆ ಇದ್ದು, ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 112 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಲಾಗಿದೆ.
ಸುಮಾರು 8,854 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ನಿತೀಶ್ ಮೆಚ್ಚಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಶೇ.52 ಜನರು ನಿತೀಶ್ ಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ. ಶೇ.42ರಷ್ಟು ಜನ ಬಿಜೆಪಿಯ ಸುಶೀಲ್ ಮೋದಿ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


