15 ವರ್ಷದ ಬಾಲಕನಿಂದ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ 10 ನೇ ತರಗತಿ ವಿದ್ಯಾರ್ಥಿನಿ
15 ವರ್ಷದ ಬಾಲಕ ನೀಡುತ್ತಿದ್ದ ಕಿರುಕುಳದಿಂದ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಥಾಣೆ: 15 ವರ್ಷದ ಬಾಲಕ ನೀಡುತ್ತಿದ್ದ ಕಿರುಕುಳದಿಂದ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು ಬಾಲಕನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ತನ್ನ ಸಂಬಂಧಿಕರ ಮನೆಯಲ್ಲಿದ್ದುಕೊಂಡು 10 ತರಗತಿಯೊಂದಿಗೆ ಕಂಪ್ಯೂಟರ್ ಕೋರ್ಸ್ ಸಹ ಕಲಿಯುತ್ತಿದ್ದಳು ಎಂದು ತಿಳಿದುಬಂದಿದೆ.
ಶಹಾಪುರ ತಾಲೂಕಿನ ಯುವಕನೊಬ್ಬ ವಿದ್ಯಾರ್ಥಿನಿಯ ನಂಬರ್ ಪಡೆದು ಕರೆ ಮಾಡಿ ಕಿರುಕುಳ ನೀಡುತ್ತಿದ್ದ ವಿಷಯ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಇದಕ್ಕೂ ಮುನ್ನ ಅಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈಗ ಕಿರುಕುಳ ನೀಡಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವತಿ ಆತ್ಮಹತ್ಯೆ ಮಾಡಿಕೊಂಡ ಹಲವು ದಿನಗಳ ಬಳಿಕ, ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ವಿಷಯ ಪೋಷಕರಿಗೆ ತಿಳಿದಿದೆ. ದೂರವಾಣಿ ಮೂಲಕ ಪದೇ ಪದೇ ಪೀಡಿಸುತಿದ್ದ ಯುವಕನ ವಿರುದ್ಧ ಸೆಕ್ಷನ್ 306 , 507 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


