ವ್ಯಾಪಂ ಹಗರಣ: ಸಿಬಿಐನಿಂದ ಮತ್ತೊಂದು ಎಫ್ಐಆರ್
ವ್ಯಾಪಂ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಮಾಜಿ ವಿಶೇಷ ಕರ್ತವ್ಯಾಧಿಕಾರಿ ಮತ್ತು ಇತರ 37 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದೆ.

Published On :
ಇಂದೋರ್: ವ್ಯಾಪಂ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಮಾಜಿ ವಿಶೇಷ ಕರ್ತವ್ಯಾಧಿಕಾರಿ ಮತ್ತು ಇತರ 37 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಪೊಲೀಸರ ನೇಮಕಕ್ಕೆ ಸಂಬಂಧಿಸಿದಂತೆ ನಡೆದ ಪರೀಕ್ಷೆಯಲ್ಲಿ ಆಗಿದೆ ಎನ್ನಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಈ ಕ್ರಮ ಕೈಗೊಂಡಿದೆ. ವಿಶೇಷ ತನಿಖಾ ದಳದಿಂದ ಪ್ರಕರಣದ ತನಿಖೆಯನ್ನು ತನ್ನತ್ತ ವರ್ಗಾಯಿಸುವ ನಿಟ್ಟಿನಲ್ಲಿ ನಡೆದ ಪ್ರಕ್ರಿಯೆ ಇದಾಗಿದೆ. ಹಗರಣದ ಬಗ್ಗೆ ಮಾಹಿತಿ ಬಹಿರಂಗಪಡಿಸಿ ಸರ್ಕಾರಿ ವೈದ್ಯ ಡಾ.ಪ್ರಕಾಶ್ ಪಾಂಡೆ ಪತ್ನಿ ಮೇಘನಾರನ್ನು ವಶಕ್ಕೆ ಪಡೆದು ಕೊಂಡು ರು.9.96ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಅವರು ಅಕ್ರಮ ವಾಗಿ ಹಣ ಹೊಂದಿದ್ದರು. ಹೀಗಾಗಿ ವಿಚಾರಣೆಗೆ ಒಳಡಿಸಲಾಗಿದೆ ಎಂದು ಪೊಲೀ ಸರು ತಿಳಿಸಿದ್ದಾರೆ. ಆದರೆ ಅದನ್ನು ಪತಿ ಪ್ರಕಾಶ್ ಪಾಂಡೆ ಅಲ್ಲಗಳೆದಿದ್ದಾರೆ. ಹಗರಣದ ಬಗ್ಗೆ ಮಾಹಿತಿ ನೀಡಿದ್ದಕ್ಕಾಗಿಯೇ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


