ಗೋವಾದ ಮೀರಮ್ಮರ್ ಬೀಚ್ ನಲ್ಲಿ ಮೃತ ಮೊಸಳೆ ಪತ್ತೆ
ಕಳೆದ ಹತ್ತು ದಿನಗಳ ಹಿಂದಷ್ಟೇ ಗೋವಾ ಮೋರ್ಜಿಮ್ ಬೀಚ್ ನಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಇದೀಗ ಮೀರಮ್ಮರ್...

ಪಣಜಿ: ಕಳೆದ ಹತ್ತು ದಿನಗಳ ಹಿಂದಷ್ಟೇ ಗೋವಾ ಮಾರ್ಜಿಮ್ ಬೀಚ್ ನಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಇದೀಗ ಮೀರಮ್ಮರ್ ಬೀಚ್ ನಲ್ಲಿ ಮತ್ತೊಂದು ಮೊಸಳೆ ಪತ್ತೆಯಾಗಿದ್ದು, ಮೊಸಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೀರಮ್ಮರ್ ಬೀಚ್ ನಲ್ಲಿ ಮೊಸಳೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಬೀಚ್ ತೆರಳಿದಾಗ ಮೊಸಳೆ ಮೃತಪಟ್ಟಿರುವುದು ತಿಳಿದುಬಂದಿದೆ. ಮೃತ ಮೊಸಳೆಯನ್ನು ಶವಪಡಿಸಿಕೊಂಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೊಸಳೆ ಸಾವಿನ ಕುರಿತಂತೆ ಯಾವುದೇ ಮಾಹಿತಿ ಇಲ್ಲ. ಸದ್ಯ ಮರಣೋತ್ತರ ಪರೀಕ್ಷಾ ವರದಿಗಳು ಬಂದ ನಂತರ ಮೊಸಳೆ ಸಾವಿನ ಕುರಿತು ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಣಜಿಯ ಪ್ರಮುಖ ಬೀಚ್ ಗಲ್ಲಿ ಮೀರಮ್ಮರ್ ಬೀಚ್ ಸಹ ಒಂದಾಗಿದೆ. ಬೀಚ್ ಗಳಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


