ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡದಿರಲು ಸರ್ಕಾರದ ಆದೇಶ
ಪಂಜಾಬ್ ನ ಗುರ್ದಾಸ್ ಪುರದಲ್ಲಿ ನಡೆಯುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾದ ಮಾಡದಂತೆ ಆದೇಶ.

ನವದೆಹಲಿ: ಪಂಜಾಬ್ ನ ಗುರ್ದಾಸ್ ಪುರದಲ್ಲಿ ನಡೆಯುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿ.ವಿ( ಸುದ್ದಿ) ಮಾಧ್ಯಮಗಳಿಗೆ ಸೂಚನೆ ನೀಡಿದೆ.
ಸರ್ಕಾರ ತನ್ನ ಆದೇಶದಲ್ಲಿ 2015 ರ ಕೇಬಲ್ ಟೆಲಿವಿಶನ್ ನೆಟ್ವರ್ಕ್ (ತಿದ್ದುಪಡಿ ಕಾಯ್ದೆ)ಯನ್ನು ಉಲ್ಲೇಖಿಸಿದ್ದು ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯನ್ನು ನೇರ ಪ್ರಸಾರ ಮಾಡುವುದನ್ನು ನಿರ್ಬಂಧಿಸಿದೆ. ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲು ಸರ್ಕಾರವೇ ಅಧಿಕಾರಿಯೊಬ್ಬರನ್ನು ನೇಮಿಸಿದ್ದು, ಅಧಿಕಾರಿ ನಿಡುವ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳು ಮಾಹಿತಿ ನೀಡಬೇಕಾಗುತ್ತದೆ.
ಆದರೆ ಪಂಜಾಬ್ ನ ಸ್ಥಳಿಯ ಮಾಧ್ಯಮಗಳು ಅಧಿಕಾರಿ ನಿಡುವ ಮಾಹಿತಿಗೆ ಕಾಯದೇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡುತ್ತಿರುವುದು ಗೃಹ ಸಚಿವಾಲಯದ ಗಮನಕ್ಕೆ ಬಂದಿರುವುದರಿಂದ ಸರ್ಕಾರ ಈ ಆದೇಶ ಹೊರಡಿಸಿದೆ.
ಕೇಬಲ್ ಟೆಲಿವಿಶನ್ ನೆಟ್ವರ್ಕ್ (ತಿದ್ದುಪಡಿ ಕಾಯ್ದೆ)ಯನ್ನು ಉಲ್ಲಂಘಿಸಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


