ಭಯೋತ್ಪಾದಕರಿಂದ ಮೇಡ್ ಇನ್ ಚೀನಾ ಗ್ರೆನೇಡ್ ವಶ
ನಿನ್ನೆ ಪಂಜಾಬ್ ನ ಗುರುದಾಸ್ ಪುರದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಪ್ರದೇಶಕ್ಕೆ ಇಂದು ಫೋರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು...

ನವದೆಹಲಿ: ನಿನ್ನೆ ಪಂಜಾಬ್ ನ ಗುರುದಾಸ್ ಪುರದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಪ್ರದೇಶಕ್ಕೆ ಇಂದು ಫೋರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಭಯೋತ್ಪಾದಕರಿಂದ ಮೇಡ್ ಇನ್ ಚೀನಾದ ಗ್ರೆನೇಡ್ ಗಳನ್ನು ವಶಪಡಿಸಿಕೊಂಡಿರುವುದಾಗಿ ಡಿಜಿಪಿ ಹೇಳಿದ್ದಾರೆ.
ಎಂಟು ವರ್ಷಗಳ ಬಳಿಕ ಪಂಜಾಬ್ ನಲ್ಲಿ ಉಗ್ರರಿಂದ ರಕ್ತದೋಕುಳಿ ಹರಿದಿದೆ. ಸೋಮವಾರ ಬೆಳಗ್ಗೆ 5 ಗಂಟೆಗೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಎಸ್ ಪಿ ಸೇರಿದಂತೆ ಐವರು ಪೊಲೀಸರು, ಮೂವರು ನಾಗರಿಕರು ಮತ್ತು ಶಂಕಿತ ಲಷ್ಕರ ಎ ತೊಯ್ಬಾ ಉಗ್ರರ ಸಂಘಟನೆಯ ಮೂವರು ಉಗ್ರರು ಸೇರಿ 11 ಮಂದಿ ಅಸುನೀಗಿದ್ದರು. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಫೋರನ್ಸಿಕ್ ತಂಡ ಉಗ್ರರಿಂದ ಮೇಡ್ ಇನ್ ಚೀನಾದ ಗ್ರೆನೇಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಸುಮೇದ್ ಸಿಂಗ್ ಸೈನಿ ಹೇಳಿದ್ದಾರೆ.
ಭಯೋತ್ಪಾದಕರ ದಾಳಿಯಿಂದ ಪಂಜಾಬ್ ಹಾಗೂ ಜಮ್ಮು ವ್ಯಾಪ್ತಿಯಲ್ಲಿರುವ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಎಚ್ಚರಿಕೆಯಿಂದಿರುವಂತೆ ಸೇನೆಗೆ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


