ದೇಶ

ಕಲಾಂಗೆ ಗೌರವ ಸೂಚಿಸಲು ಜಾಹೀರಾತು ಹಿಂಪಡೆದ ಆಪ್ ಸರ್ಕಾರ

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ನಿಧನರಾದ ಹಿನ್ನೆಲೆಯಲ್ಲಿ ಕಲಾಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಪ್ರಧಾನಿ ಮೋದಿ ವಿರುದ್ಧ ನಡೆಸುತ್ತಿದ್ದ ಜಾಹೀರಾತು ಪ್ರಚಾರವನ್ನು ಆಮ್ ಆದ್ಮಿ ಸರ್ಕಾರ ಬುಧವಾರ ಹಿಂಪಡೆದಿದೆ...

ಕಲಾಂಗೆ ಗೌರವ ಸೂಚಿಸಲು ಜಾಹೀರಾತು ಹಿಂಪಡೆದ ಆಪ್ ಸರ್ಕಾರ
ಪ್ರಧಾನಿ ಮೋದಿ ವಿರುದ್ಧ ಜಾಹೀರಾತು ಪ್ರಕಟಿಸಿರುವ ಆಪ್ ಸರ್ಕಾರ
Published On :

ನವದೆಹಲಿ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ನಿಧನರಾದ ಹಿನ್ನೆಲೆಯಲ್ಲಿ ಕಲಾಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಪ್ರಧಾನಿ ಮೋದಿ ವಿರುದ್ಧ ನಡೆಸುತ್ತಿದ್ದ ಜಾಹೀರಾತು ಪ್ರಚಾರವನ್ನು ಆಮ್ ಆದ್ಮಿ ಸರ್ಕಾರ ಬುಧವಾರ ಹಿಂಪಡೆದಿದೆ.

ದೆಹಲಿ ಸರ್ಕಾರದ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ಕೆಲಸ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಡುತ್ತಿಲ್ಲ. ಪ್ರತಿಯೊಂದು ಕೆಲಸದಲ್ಲೂ ಮೋದಿಯವರು ಮಧ್ಯೆ ಪ್ರವೇಶಿಸುತ್ತಿದೆ ಎಂದು ಆರೋಪಿಸಿರುವ ಆಪ್ ಸರ್ಕಾರ ಮೋದಿ ವಿರುದ್ಧ ಜಾಹೀರಾತು ಪ್ರಚಾರ ಆರಂಭಿಸಿತ್ತು.

ಇದೀಗ ಅಬ್ದುಲ್ ಕಲಾಂ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಈ ಜಾಹೀರಾತುಗಳನ್ನು ಹಿಂಪಡೆಯುತ್ತಿರುವ ಆಮ್ ಆದ್ಮಿ ಪಕ್ಷವು ಹೊರಾಂಗಣ ಸಾರ್ವಜನಿಕ ಪ್ರದೇಶಗಳಲ್ಲಿ ಹಾಕಿರುವ ಎಲ್ಲಾ ಜಾಹೀರಾತುಗಳನ್ನು ತೆಗೆಯುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿನೆ ನೀಡಿದೆ ಎಂದು ತಿಳಿದುಬಂದಿದೆ.

ಆಮ್ ಆದ್ಮಿ ಸರ್ಕಾರ ಸಾರ್ವಜನಿಕರ ಹಣವನ್ನು ತಮ್ಮ ಪಕ್ಷದ ಜಾಹೀರಾತುಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಪ್ ಸರ್ಕಾರ ಹಲವು ದಿನಗಳಿಂದ ವಿರೋಧ ಪಕ್ಷಗಳ ಹಲವು ಟೀಕೆಗಳಿಗೆ ಕಾರಣವಾಗಿತ್ತು. ಇದೀಗ ಟೀಕೆ, ವಿರೋಧಗಳನ್ನು ಕಡಿಮೆ ಮಾಡುವ ಸಲುವಾಗಿ ಕಲಾಂ ಅವರ ಹೆಸರು ಹೇಳಿ ಜಾಹೀರಾತು ವಿವಾದನ್ನು ತಣ್ಣಗಾಗಿಸಲು ಆಪ್ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.