ದೇಶ

ಯಾಕೂಬ್ ಮೆಮನ್ ಕ್ಷಮಾದಾನ ಅರ್ಜಿ: ರಾಷ್ಟಪತಿಯನ್ನು ಭೇಟಿ ಮಾಡಿದ ಗೃಹ ಸಚಿವ ರಾಜನಾಥ್ ಸಿಂಗ್

ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸುವ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

ಯಾಕೂಬ್ ಮೆಮನ್ ಕ್ಷಮಾದಾನ ಅರ್ಜಿ: ರಾಷ್ಟಪತಿಯನ್ನು ಭೇಟಿ ಮಾಡಿದ ಗೃಹ ಸಚಿವ ರಾಜನಾಥ್ ಸಿಂಗ್
ರಾಜನಾಥ್ ಸಿಂಗ್- ಪ್ರಣಬ್ ಮುಖರ್ಜಿ ಭೇಟಿ(ಸಂಗ್ರಹ ಚಿತ್ರ)
Published On :

ನವದೆಹಲಿ: 1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸುವ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

ಕ್ಷಮಾದಾನಕ್ಕೆ ಯಾಕೂಬ್ ಮೆಮನ್ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿರುವ ರಾಜನಾಥ್ ಸಿಂಗ್ ಗಲ್ಲು ಶಿಕ್ಷೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ರಾಜನಾಥ್ ಸಿಂಗ್ ಭೇಟಿ ಕುತೂಹಲ ಮೂಡಿಸಿದ್ದು ಗಲ್ಲು ಶಿಕ್ಷೆ ಬಗ್ಗೆ ರಾಷ್ಟ್ರಪತಿ ಕೈಗೊಳ್ಳಲಿರುವ ನಿರ್ಣಯ ಅಂತಿಮವಾಗಿರಲಿದೆ.

ಮತ್ತೊಂದೆಡೆ ಮೆಮನ್ ಇರುವ ನಾಗಪುರ ಜೈಲಿನ 500 ಮಿ.ಪ್ರದೇಶದಲ್ಲಿ ಸೆಕ್ಷನ್ 144 (ನಿಷೇದಾಜ್ಞೆ) ಜಾರಿ ಮಾಡಲಾಗಿದೆ. ಆಂಬುಲೆನ್ಸ್ ಹಾಗೂ ಗಲ್ಲಿಗೇರಿಸುವುದಕ್ಕೂ ಮುನ್ನ ಮೆಮನ್ ಆರೋಗ್ಯ ತಪಾಸಣೆ ನಡೆಸುವ ಸಂದರ್ಭದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ನಾಗಪುರ ಜೈಲಿಗೆ ತಲುಪಿವೆ. ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಅರ್ಜಿ ಈ ವರೆಗೂ ಗೃಹಸಚಿವಾಲಯದಲ್ಲಿಯೇ ಉಳಿದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.