ಯಾಕೂಬ್ ಗಲ್ಲು ವಿರೋಧಿಸಿ ಪ್ರತಿಭಟನೆ ನಡೆಸಿದ ಜಮ್ಮು ಶಾಸಕನ ಬಂಧನ
1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನಾ ರ್ಯಾಲಿ ನಡೆಸಿದ ಉತ್ತರ...

ಶ್ರೀನಗರ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನಾ ರ್ಯಾಲಿ ನಡೆಸಿದ ಉತ್ತರ ಕಾಶ್ಮೀರದ ಲಾಂಗೇಟ್ ಕ್ಷೇತ್ರದ ಪಕ್ಷೇತರ ಶಾಸಕ ಶೇಖ್ ಅಬ್ದುಲ್ ರಶೀದ್ ಮತ್ತು ಬೆಂಬಲಿಗರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಸರಣಿ ಸ್ಫೋಟದಲ್ಲಿ ಸುಮಾರು 273 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಭೂಗತ ಪಾತಕಿ ಯಾಕೂಬ್ ಗೆ ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ. ಇದನ್ನು ವಿರೋಧಿಸಿ ಶ್ರೀನಗರದ ಲಾಲ್ ಚೌಕ್‌ನಲ್ಲಿ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ರಶೀದ್ ಮತ್ತು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯ ವೇಳೆ ಯಾಕೂಬ್‌ಗೆ ಗಲ್ಲು ಶಿಕ್ಷೆ ನೀಡಿರುವುದು ಕರಾಳ ದಿನ, ಇದೊಂದು ಅಂಧಾ ಕಾನೂನು ಎಂಬ ಘೋಷಣೆಗಳನ್ನು ಕೂಗಿ ಶಾಸಕ ಹಾಗೂ ಆತನ ಬೆಂಬಲಿಗರು ಉದ್ದಟತನ ಮೆರೆದಿದ್ದಾರೆ ಎಂದು ವರದಿಯಾಗಿದೆ.
ಶಾಸಕ ರಶೀದ್ ಮತ್ತು ಬೆಂಬಲಿಗರನ್ನು ಕೋತಿಭಾಗ್‌ನ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


